ಮಂಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾದ ಆರೋಪಿಗೆ ಕೊರೊನಾ ಸೋಂಕು ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ಬಾಲಕಿಯನ್ನು ಕಿಡ್ನಾಪ್ ಮಾಡಿ ವಿವಾಹ ಮಾಡಿಕೊಂಡಿದ್ದ. ಹೀಗಾಗಿ ಬಾಲಕಿಯ ಮನೆಯವರು ಯುವಕನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಯುವಕನನ್ನು ಬಂಧಿಸಿದ್ದು, ಬಂಧಿತನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ.

ಬಂಧಿತ ಆರೋಪಿಗೆ ಸೋಂಕು ತಗುಲಿದ್ದು ತಿಳಿಯುತ್ತಿದ್ದಂತೆ ಆತನನ್ನು ಬಂಧಿಸಿದ್ದ ಐವರು ಪೊಲೀಸರನ್ನು ಕ್ವಾರಂಟೈನ್ ಮಾಡಿದ್ದಾರೆ.

Leave a Reply

Your email address will not be published.

You May Also Like

ಮದುಮಗನ ತಡೆದ ಪೊಲೀಸರು : ಶುಭ ಕೋರಿ ಕಳುಹಿಸಿದರು

ರಾಜ್ಯದಲ್ಲಿ ಕೊರೋನಾದಿಂದ ಕರ್ಫ್ಯೂ ಜಾರಿಯಾಗಿದ್ದರಿಂದ ಸರಳವಾಗಿ ವಿವಾಹ ಮಾಡಿಕೊಳ್ಳಲು ತೆರಳುತ್ತಿದ್ದ ವರನನ್ನು ತಡೆದ ಪೊಲೀಸರು, ಮದುವೆ ಆಗುತ್ತಿರುವುದು ಖಚಿತ ಪಡಿಸಿಕೊಂಡ ಬಳಿಕ ಶುಭಕೋರಿ ಕಳುಹಿಸಿರುವ ಘಟನೆ ನಡೆದಿದೆ.

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…

ಮಾಜಿ ಪಿಎಂ ದೇವೇಗೌಡರಿಗೆ ಪ್ರಶಂಸಾ ಪತ್ರ ಕಳುಹಿಸಿದ ಹಾಲಿ ಪಿಎಂ

ಜೆಡಿಎಸ್ ವರಿಷ್ಟ ಎಚ್.ಡಿ.ದೇವೇಗೌಡ ಪಿಎಂ ಕೇರ್ ಹಾಗೂ ಕರ್ನಾಟಕ, ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ಅವರನ್ನು ಪ್ರಶಂಶಿಸಿ ಪತ್ರ ಬರೆದಿದ್ದಾರೆ.

ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!

ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…