ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರತಿಜ್ಞಾ ದಿನ ಎಂಬ ಕಾರ್ಯಕ್ರಮದಡಿ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಕಾಂಗ್ರೆಸ್ ನ ಸಾರಥ್ಯ ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಬೇರೆ ವಿಧಾನಗಳ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್ ಧ್ವಜ ಪಡೆದರು.

Leave a Reply

Your email address will not be published. Required fields are marked *

You May Also Like

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…

ಗ್ರಾಪಂ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಗಳಿಗೆ ಸ್ಥಳೀಯ ಎಫ್ ಎಂ.ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಶುಂಠಿ ವ್ಯಾಪಾರಿಯಿಂದ ಮುಂಡರಗಿ ಪೊಲೀಸ್ ಸ್ಟೇಶನ್ ಗೆ ಸೋಂಕಿನ ಸಂಕಟ..!

ಮುಂಡರಗಿ: ಕೊಡಗು ಜಿಲ್ಲೆಯ ಶುಂಠಿ ವ್ಯಾಪಾರಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಆದ್ರೆ ಆತನ ಟ್ರಾವೆಲ್ ಹಿಸ್ಟರಿ…