ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರತಿಜ್ಞಾ ದಿನ ಎಂಬ ಕಾರ್ಯಕ್ರಮದಡಿ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಕಾಂಗ್ರೆಸ್ ನ ಸಾರಥ್ಯ ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಬೇರೆ ವಿಧಾನಗಳ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್ ಧ್ವಜ ಪಡೆದರು.

Leave a Reply

Your email address will not be published. Required fields are marked *

You May Also Like

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಹೊಳೆಆಲೂರ: ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.