ಲಡಾಕ್: ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.
ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಭೂಸೇನೆಯ ಮುಖ್ಯಸ್ಥ ನರವಾಣೆ ಜೊತೆಗಿದ್ದರು.
ಲಡಾಖ್‍ಗೆ ಭೇಟಿ ಕೊಡುವ ಮೂಲಕ ಮೋದಿ ಲಡಾಯಿಯ ಹಾದಿ ತುಳಿದರೆ ಎಂಬ ಮಾತುಗಳೂ ಕೇಳಿ ಬಂದಿವೆ. ಸೈನಿಕರನ್ನು ಹುರಿದುಂಬಿಸಿದ ಅವರು ಕೆಲವು ಪ್ರಮುಖ ಅಂಶಗಳನ್ನು ಒತ್ತಿ ಹೇಳಿದ್ದಾರೆ.
ನೆರೆದೇಶದ ವಿಸ್ತರಣಾವಾದದ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಪ್ರತಿ ಭಾರತೀಯನಿಗೂ ನಮ್ಮ ಸೈನ್ಯದ ತಾಕತ್ತಿನ ಬಗ್ಗೆ ಹೆಮ್ಮೆಯಿದೆ. ನೀವು ಈಗ ಕರ್ತವ್ಯ ನಿರ್ವಹಿಸುತ್ತಿರುವ ಈ ಎತ್ತರದ ಪ್ರದೇಶಕ್ಕಿಂತಲೂ ನಿಮ್ಮ ಧೈರ್ಯ ಎತ್ತರ ಮಟ್ಟದಲ್ಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜೂನ್ 15ರ ಸಂಘರ್ಷದಲ್ಲಿ ದೇಶದ 20 ಯೋಧರು ಹುತಾತ್ಮರಾದ ನಂತರ, ಸರ್ವ ಪಕ್ಷಗಳ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಒಂದಿಂಚೂ ನೆಲವನ್ನು ಯಾರೂ ಆಕ್ರಮಿಸಿಲ್ಲ ಎಂದಿದ್ದರು. ಆದರೆ, ಕೆಲವು ಮಾಧ್ಯಮಗಳು ಪ್ರಕಟಿಸಿದ ಉಪಗ್ರಹ ಚಿತ್ರಗಳಲ್ಲಿ ಚೀನಾ ಪೂರ್ವ ಲಡಾಕ್‍ನಲ್ಲಿ ಅತಿಕ್ರಮಣ ಮಾಡಿದ್ದು ಬಯಲಾಗಿತ್ತು.

Leave a Reply

Your email address will not be published. Required fields are marked *

You May Also Like

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.

ಸಿಎಂ ಯಡಿಯೂರಪ್ಪ ರಾಜಾಹುಲಿ ಅಂದ್ರು ಆರ್.ಅಶೋಕ

ಚಾಮರಾಜನಗರ:ಹುಲಿಗೆ ಹಿಂದಿನಿಂದ ಆಡಳಿತ ಮಾಡಿ ಗೊತ್ತಿಲ್ಲ. ನೇರ ಆಡಳಿತವೇ ಸಿಎಂ ಯಡಿಯೂರಪ್ಪ ಅವರ ಸ್ವಭಾವ ಹೀಗಾಗಿ ಯಡಿಯೂರಪ್ಪ ರಾಜಾಹುಲಿ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್

ವಿಲಕ್ಷಣ ಘಟನೆಯೊಂದರಲ್ಲಿ, ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.