ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ ಬಳಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಡ್ಯೂಟಿ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು
ಗದಗ ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಗದಗನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕರ್ನಾಟಕದಲ್ಲಿ ಕಿಕ್ಕಿರಿಯುತ್ತಿದೆ ಸೋಂಕು!: ಇಂದು 5030 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 5030 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್! : ಒಟ್ಟು ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆ!

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ.