ಗದಗ: ಕಾರ್ ಅಪಘಾತ ಮೂವರು ಶಿಕ್ಷಕರಿಗೆ ಗಂಭೀರ ಗಾಯ

ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ ಬಳಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಡ್ಯೂಟಿ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು
ಗದಗ ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಗದಗನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version