ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದ ಫಕ್ಕೀರಪ್ಪ(55) ಮೃತ ಬೈಕ್ ಸವಾರ.
ಅಪಘಾತ ಸಂಭವಿಸಿದ ಕೂಡಲೇ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.