ಬೆಂಗಳೂರು: “ಅಭಿಮಾನಿಗಳೇ ದೇವರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸುತ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೆ ಇವತ್ತು ಬೆಳಗ್ಗೆ ಅಮ್ಮ ಬಂದು ‘ರಚ್ಚು ಬೆಳಿಗ್ಗೆ ಬೆಳಿಗ್ಗೆ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೆ. ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ದಾರೆ ನನ್ನ ನೋಡುತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೆ ಬಿಡ್ದೆ “ಮೇಡಂ ನಾವು ನಿಮ್ಮ ದೊಡ್ಡ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದು ಇರ್ಬೇಕು ಮೇಡಂ’ ಎಂದು ಗಿಫ್ಟ್ ವ್ರಾಪರ್ ಓಪನ್ ಮಾಡ್ಸಿ ನನ್ನ ಫೋಟೋ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಪಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕಳಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕರಾಗಿ ನಗುತ್ತಲೇ ಹೊರಟೇ ಬಿಟ್ಟರು.
ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನು ಸುಖಕರವಾಗಿರಲಿ ಅಂತ ದೇವರಲ್ಲಿ ಬೇಡ್ಕೋತೀನಿ.
ನನ್ನ ಕಲಾ ಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು. ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಯಲ್ಲ ಶೂನ್ಯ. ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನು ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ.
ನಾನು repost ಮಾಡುತ್ತೇನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ.
ನಿಮ್ಮ, ರಚಿತಾ ರಾಮ್