ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಒತ್ತುವರಿ ತೆರವು ಜಿಲ್ಲಾಧಿಕಾರಿ ಗಡುವು

ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಸಹಾಯಧನ

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.