ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳು ಬೆಂಗಳೂರು ಕೇಂದ್ರಕ್ಕೆ ಹೊರ ರಾಜ್ಯಗಳಿಂದ ಮತ್ತು ಬೇರೆ ಜಿಲ್ಲೆಗಳಿಂದ ಆಗಮಿಸಬೇಕಿರುವುದರಿಂದ, ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲದಿರುವುದರಿಂದ ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ದಿನೇ ದಿನೇ ವೇಗವಾಗಿ ಹರಡುತ್ತಿರುವ ದಿನಾಂಕ: 07-07-2020 ಮಂಗಳವಾರ ನಡೆಯಲಿರುವ ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮವಾಗಿ ಮುಂದೂಡಿದೆ. ಮುಂದಿನ ದಿನಾಂಕದ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ http://kpse.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version