ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ


ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ ಸಮುದಾಯವರನ್ನು ನಿರಾಕರಿಸುವುದರಿಂದ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತದೆ ಎಂದು ಸೋನಿಯಾ ಗಾಂಧಿಯವರು ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಯುಪಿಎ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಬರೆದಿರುವ ಪತ್ರವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಬಿಸಿ ಸಮುದಾಯದ ವಿದ್ಯಾರ್ಥಿಗಳಿಗೆ ಕಾನೂನುಬದ್ಧವಾಗಿ ಮೀಸಲಾತಿಯನ್ನು ನೀಟ್ ಪರೀಕ್ಷೆಯಲ್ಲಿ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯರಿಗೆ ಪತ್ರ ಬರೆದಿದ್ದಾರೆ. ಇದು ಸಾಮಾಜಿಕ ನ್ಯಾಯಕ್ಕಾಗಿ ಬೇಡಿಕೆ. ಕೇಂದ್ರ ಸರ್ಕಾರ ಇದನ್ನು ಜಾರಿಗೊಳಿಸುತ್ತದೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋನಿಯಾ ಗಾಂಧಿ ಪತ್ರ ಬರೆದಿದ್ದು, ಅಖಿಲ ಭಾರತ ಕೋಟಾದಡಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದರಲ್ಲಿ 2017ರಲ್ಲಿ 11,000 ಸೀಟುಗಳನ್ನು ನಿರಾಕರಿಸಲಾಗಿದೆ ಎಂದು ಅವರು ದೂರಿದ್ದರು. ಜೊತೆಗೆ, ಕೆಲವು ಅಂಕಿಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು,
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಮಂತ್ರವನ್ನು ಜಪಿಸುವ ಬಿಜೆಪಿ, ಸಂಘಪರಿವಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಇದೀಗ ಏನು ಮಾಡುತ್ತಾರೆ ಎಂದು ಕಾದುನೋಡಬೇಕಿದೆ.

Exit mobile version