ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

ಶ್ರೀಲಂಕಾದ ರಾಜಧಾನಿ ಕೊಲಂಬೊದ ಹೊರ ಭಾಗದಲ್ಲಿ ಸೈಕಲ್ ಸವಾರನಿಗೆ ಮೆಂಡಿಸ್ ಅವರ ಕಾರು ಡಿಕ್ಕಿ ಹೊಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕುಸಲ್ ಮೆಂಡಿಸ್ ಶ್ರೀಲಂಕಾದ ಪುನದುರಾ ಪ್ರದೇಶದಲ್ಲಿ ತನ್ನ ಎಸ್ಯುರವಿ ಕಾರನ್ನು ಡ್ರೈವ್ ಮಾಡಿಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವೇಳೆ

ಅಲ್ಲಿ ಸೈಕಲ್ ಓಡಿಸುತ್ತಿದ್ದ ಓರ್ವನಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹೀಗಾಗಿ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಕುಸಲ್ ಮಂಡಿಸ್ ಅವರನ್ನು ಬಂಧಿಸಿದ್ದು, ಅವರ ಕಾರನ್ನು ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಮಾರ್ಚ್ ನಲ್ಲಿ ಶ್ರೀಲಂಕಾದಲ್ಲಿಯೇ ನಡೆಯಬೇಕಿದ್ದ ಇಂಗ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದ 16 ಜನರಲ್ಲಿ ಮೆಂಡಿಸ್ ಕೂಡ ಇದ್ದರು. ಆದರೆ ಕೊರೊನ ವೈರಸ್ ಭೀತಿಯಿಂದ ಈ ಸರಣಿಯನ್ನು ರದ್ದುಮಾಡಲಾಗಿತ್ತು. ಈ ಹಿಂದೆ 2003ರಲ್ಲಿ ಶ್ರೀಲಂಕಾದ ಮಾಜಿ ಸ್ಪಿನ್ ಬೌಲರ್ ಕೌಶಲ್ ಲೋಕುರಾಚಿ ಅವರು ಕೂಡ ಮಹಿಳಾ ಪಾದಚಾರಿಗೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದರು. ಆಗ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆಯ ನಂತರ ಕೌಶಲ್ ಅವರನ್ನು ನಾಲ್ಕು ವರ್ಷ ಕ್ರಿಕೆಟಿನಿಂದ ಅಮಾನತು ಮಾಡಿ ಜೈಲಿಗೆ ಕೂಡ ಕಳುಹಿಸಲಾಗಿತ್ತು.

Leave a Reply

Your email address will not be published.

You May Also Like

ಬಿಎಂಟಿಸಿ ಪಾಸ್ ದರ ಇಳಿಕೆ: ಇನ್ಮುಂದೆ ಟಿಕೇಟ್ ಬದಲಾಗಿ ಪಾಸ್, ಯಾವುದಕ್ಕೆ ಎಷ್ಟು?

ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ರಾಯಚೂರಿನಲ್ಲಿಂದು 9 ಕೊರೊನಾ ಪಾಟಿಟಿವ್..!

ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ.