ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ ಪಾಲಿಸುವುದು ಕಡ್ಡಾಯ ಎಂದು ಕೇರಳ ಸರ್ಕಾರ ಭಾನುವಾರ ನಿಯಮ ರೂಪಿಸಿದೆ.

ಕೇರಳ ಸಾಂಕ್ರಾಮಿಕ ತಡೆ ಸುಗ್ರಿವಾಜ್ಞೆ -2020ರ ಅನ್ವಯ ಸಾರ್ವಜನಿಕ ಸ್ಥಳ ಮತ್ತು ಕೆಲಸದ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದರೆ 10 ಸಾವಿರ ರೂ ದಂಡ ವಿಧಿಸಲು ನಿಯಮ ರೂಪಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 6 ಅಡಿ ಸಾಮಾಜಿಕ ಅಂತರ ಕಾಪಾಡಬೇಕು, ಮದುವೆ ಸಮಾರಂಭದಲ್ಲಿ ಗರಿಷ್ಠ 50 ಮತ್ತು ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಗರಿಷ್ಠ 20 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ.

ಈ ಎಲ್ಲ ನಿಯಮಗಳು ಒಂದು ವರ್ಷ ಜಾರಿಯಲ್ಲಿರಲಿವೆ ಎಂದು ಕೇರಳ ಸರ್ಕಾರದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಪಂಜಾಬ್ ಹಾದಿ ಹಿಡಿದು ಕೇಂದ್ರದ ವಿರುದ್ಧ ನಿಂತ ರಾಜಸ್ಥಾನ್ ಸರ್ಕಾರ!

ಜೈಪುರ : ಕೃಷಿ ಮಸೂದೆಯನ್ನು ಪಂಜಾಬ್ ಸರ್ಕಾರ ವಿರೋಧಿಸಿದ ಬೆನ್ನಲ್ಲಿಯೇ ರಾಜಸ್ಥಾನ್ ಸರ್ಕಾರ ಕೂಡ ಅಪಸ್ವರ ಎತ್ತಿದೆ.

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ನಟ ಸುಶಾಂತ್ ಆತ್ಮಹತ್ಯೆ – 8 ಜನ ಸೆಲೆಬ್ರಿಟಿಗಳ ಮೇಲೆ ದೂರು ದಾಖಲು!

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ…