ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ ಪಾಲಿಸುವುದು ಕಡ್ಡಾಯ ಎಂದು ಕೇರಳ ಸರ್ಕಾರ ಭಾನುವಾರ ನಿಯಮ ರೂಪಿಸಿದೆ.

ಕೇರಳ ಸಾಂಕ್ರಾಮಿಕ ತಡೆ ಸುಗ್ರಿವಾಜ್ಞೆ -2020ರ ಅನ್ವಯ ಸಾರ್ವಜನಿಕ ಸ್ಥಳ ಮತ್ತು ಕೆಲಸದ ಸ್ಥಳದಲ್ಲಿ ಮಾಸ್ಕ್ ಧರಿಸದೇ ಇದ್ದರೆ 10 ಸಾವಿರ ರೂ ದಂಡ ವಿಧಿಸಲು ನಿಯಮ ರೂಪಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 6 ಅಡಿ ಸಾಮಾಜಿಕ ಅಂತರ ಕಾಪಾಡಬೇಕು, ಮದುವೆ ಸಮಾರಂಭದಲ್ಲಿ ಗರಿಷ್ಠ 50 ಮತ್ತು ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಗರಿಷ್ಠ 20 ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ.

ಈ ಎಲ್ಲ ನಿಯಮಗಳು ಒಂದು ವರ್ಷ ಜಾರಿಯಲ್ಲಿರಲಿವೆ ಎಂದು ಕೇರಳ ಸರ್ಕಾರದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…