ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಟ್ಟದಳ್ಳಿ ಜಂಕ್ಷನ್ ಬಳಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು ಪ್ರವಾಸಿಗರ ವಾಹನಗಳನ್ನು ತಡೆದು ಮರಳಿ ಕಳುಹಿಸಿದ್ದಾರೆ. ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಅಂಗಡಿಗಳಿಗೆ ತೆರಳಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಅದರಲ್ಲಿ ಸೋಂಕಿತರನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಮಳೆಗಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಬೇಕಾಗಿದೆ. ಈಗಂತೂ ಕೊರೊನಾ ಭಯದಿಂದ ಮನೆ ಬಿಟ್ಟು ಹೊರಬರಲು ರೈತರು ಭಯಪಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಡಗುಂದಿ: ಚರಕ ಕ್ಲಿನಿಕ್ ಉದ್ಘಾಟನಾ ಸಮಾರಂಭ ವೈದ್ಯ ವೃತ್ತಿ ವ್ಯಾಪಾರೀಕರಣದತ್ತ ಶಾಸಕ ಶಿವಾನಂದ ಪಾಟೀಲ ವಿಷಾಧ

ವರದಿ : ಗುಲಾಬಚಂದ ಜಾಧವನಿಡಗುಂದಿ : ವೈದ್ಯ ವೃತ್ತಿ ಅತ್ಯಂತ ಪವಿತ್ರ. ಎಲ್ಲ ವೃತ್ತಿಗಳಲ್ಲೇ ಶ್ರೇಷ್ಠ.…

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.