ಮಂಡ್ಯ : ಜೆಡಿಎಸ್ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಆಸ್ಪತ್ರೆಗೆ ಹೋಗಲು ಕಿರಿಕ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ಆಸ್ಪತ್ರೆಗೆ ಹೋಗಲು ರಂಪಾಟ ಮಾಡಿದ್ದಾರೆ. ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲಿಯೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದರು. ಅಲ್ಲದೇ ಆರೋಗ್ಯ ಸಚಿವ ಶ್ರೀರಾಮುಲು ಅವರ ಜೊತೆ ನಾನು ಮಾತನಾಡಿದ್ದೇನೆ. ಹೀಗಾಗಿ ನಾನು ಮನೆಯಲ್ಲೇ ಇರುತ್ತೀನಿ ಎಂದು ಕಿರಿಕ್ ಮಾಡಿದ್ದಾರೆ.

ಅಷ್ಟೇ ಅಲ್ಲದೇ ಮನೆಯ ಮುಂದೆ ಸೋಂಕಿತ ಮುಖಂಡ ಹೈಡ್ರಾಮಾ ಮಾಡಿದ್ದಾರೆ. ಟಿಎಚ್ಓಿ ಡಾ.ಧನಂಜಯ್ ಸೇರಿದಂತೆ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಆಸ್ಪತ್ರೆಗೆ ಹೋಗಲು ಜೆಡಿಎಸ್ ಮುಖಂಡನ ಒಪ್ಪದೇ ಪಟ್ಟು ಹಿಡಿದಿದ್ದರು.

ಕೆಲವು ರಾಜಕಾರಣಿಗಳಿಂದ ಅಧಿಕಾರಿಗಳಿಗೆ ಫೋನ್ ಮಾಡಿಸುವ ಮೂಲಕ ಮರಳಿ ಹೋಗುವಂತೆ ಒತ್ತಡ ಹಾಕಿದ್ದಾರೆ. ಸತತ ಒಂದು ಗಂಟೆ ಮನವೊಲಿಕೆ ಬಳಿಕ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸುಮಾರು ಒಂದು ಗಂಟೆಯ ಸಮಯ ಜೆಡಿಎಸ್ ಮುಖಂಡನ ಮನೆಯ ಮುಂದೆ ಅಂಬುಲೆನ್ಸ್ ನಿಲ್ಲಿಸಿಕೊಂಡು ಸಿಬ್ಬಂದಿ ನಿಂತಿದ್ದರು.

Leave a Reply

Your email address will not be published. Required fields are marked *

You May Also Like

ಜೆಡಿಎಸ್ ಸ್ಥಾನ ಕಬಳಿಸಲು ಬಿಜೆಪಿ ಹೊಂಚು – ರೇವಣ್ಣ!

ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಆಲಮಟ್ಟಿ ಪದವಿ ಕಾಲೇಜಿಗೆ ಎಲ್.ಐ.ಸಿ.ತಂಡ ಭೇಟಿ

ಗುಲಾಬಚಂದ ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ…

ಕೊರೋನಾ ವಾರಿಯರ್ಸ್ ಗೆ ಗ್ರಾಮಸ್ಥರಿಂದ ಗೌರವ

ಹಾವೇರಿ: ಕೊರೊನಾ ವಾರಿಯರ್ಸ್ ಸೇವೆ ಸ್ಮರಿಸಿ ಅವರನ್ನು ಇಂದು ಹಾವೇರಿ ಜಿಲ್ಲೆಯಲ್ಲಿ ಗೌರವಿಸಲಾಯಿತು.ಆಶಾ ಕಾರ್ಯಕರ್ತೆಯರು, ಆರೋಗ್ಯ…