ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ ಅವರೇ ಪತ್ರಿಕಾ ಪ್ರಕಟಣೆ ಹಾಗೂ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸುಮಲತಾ ಮಾಡಿದ ಪೋಸ್ಟ್

ಆತ್ಮೀಯರೆ,

ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.

ರೋಗನಿ ರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ.

ಸುಮಲತಾ ಅಂಬರೀಷ್

Leave a Reply

Your email address will not be published. Required fields are marked *

You May Also Like

ಒಂದು ವರ್ಷದವರೆಗೆ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಪಾಪಿ!

ಪಾಣಿಪತ್ : ಪಾಪಿಯೊಬ್ಬ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

60 ಜನರಿರುವ ಕುಟುಂಬಕ್ಕೆ ಎಂಟ್ರಿ ಕೊಟ್ಟ ಸೋಂಕು!

ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ…

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.