ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಅಭಿಪ್ರಾಯಕ್ಕೆ ನನ್ನ ಸಹಮತವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ನಡೆಯುತ್ತಿರುವ ಆನ್ಲೈನ್ ತರಗತಿ ಮತ್ತು ಅವ್ಯವಹಾರ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಖರ್ಚು ವೆಚ್ಚಗಳ ಸೂಕ್ತ ಮಾಹಿತಿ ಸರ್ಕಾರದ ಬಳಿಯಿದ್ದರೆ ಅಧಿಕಾರಿಗಳ ಜೊತೆ ಅದನ್ನು ಕಳಿಸಿಕೊಡಲಿ, ನಾನೂ ಒಮ್ಮೆ ನೋಡುತ್ತೇನೆ. ತಾರ್ತಿಕ ಅಂತ್ಯ ಕಾಣುವವರೆಗೂ ಈ ವಿಚಾರದಿಂದ ಹಿಂದೆ ಸರಿಯುವುದಿಲ್ಲ. ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು. ಇದನ್ನು ಕೇಳುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಹಳ್ಳಿಗಳಿಂದ ಬಂದ ಜನರು ಬೆಂಗಳೂರಿನಲ್ಲಿ ಉಳಿದುಕೊಳ್ಳುವಂತಹ ವಾತಾವರಣವನ್ನು ಸರ್ಕಾರ ಕಲ್ಪಿಸಬೇಕಿತ್ತು, ಆಗ ಅವರು ಮರಳಿ ಹಳ್ಳಿಕಡೆ ಮುಖ ಮಾಡುವಂತಹಾ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ಅವರಿಗೆ ವಸತಿ, ಉದ್ಯೋಗ ನೀಡುವ ಜೊತೆಗೆ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದೇ ಜನ ಹಳ್ಳಿಗಳಿಗೆ ಮರಳಲು ಕಾರಣ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲಾಕ್‌ಡೌನ್ ನಂತರವೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಹಾಗಾದರೆ ಲಾಕ್‌ಡೌನ್‌ನಿಂದಾದ ಪ್ರಯೋಜನವೇನು? ಈಗ ನಿಜವಾಗಿ ಲಾಕ್‌ಡೌನ್ ಅಗತ್ಯವಿದೆ. ಸರ್ಕಾರ ಕೇವಲ ಆರ್ಥಿಕತೆಗೆ ಮಹತ್ವ ನೀಡುತ್ತಿದೆ, ಜನರ ಜೀವಗಳಿಗೆ ಬೆಲೆ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.

ಸುಮಲತಾಗೆ ಪಾಸಿಟಿವ್: ಸಂಪರ್ಕಿತರಿಂದ ಪರೀಕ್ಷೆಗೆ ರಶ್.!

ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು…

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಗದಗ ಜಿಲ್ಲೆಯಲ್ಲಿ ಸೋಂಕಿನ ಸರಣಿ ಸ್ಪೋಟ!: ಇಂದು 40 ಪಾಸಿಟಿವ್..!

ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ.