ಗದಗ: ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿದೆ.
ಗದಗ ತಾಲೂಕಿನ ಸೀತಾಲಹರಿ ಗ್ರಾಮದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜುಲೈ 8 ರಂದು ಕೆಮ್ಮು, ನೆಗಡಿ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತರಾಗಿ ಸ್ವ್ಯಾಬ್ ಟೆಸ್ಟ್ ಮಾಡಿಸಿಕೊಂಡಿದ್ದರು.
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಆಗಮಿಸಿ ತಮ್ಮ ಗಂಟಲು ದ್ರವದ ಮಾದರಿ ಪರೀಕ್ಷೆಗಾಗಿ ಒದಗಿಸಿದ್ದು,
ಬಳಿಕ ಮನೆಗೆ ತೆರಳಿದ್ದರು. ಇಂದು ಮುಂಜಾನೆ ಎದೆ ಉರಿತದಿಂದ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಅಂತ್ಯಕ್ರಿಯೆ ಕೋವಿಡ್-19 ಮಾರ್ಗಸೂಚಿಗಳನ್ವ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು
ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಪ್ಪತ್ನಾಲ್ಕು ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು?

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಪ್ರಕರಣಗಳಿಗೆ ಮಹರಾಷ್ಟ್ರವೇ ಮೂಲವಾಗಿದೆ.

ಸಂಸದೆ ಸುಮಲತಾಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಗೂ ಕೊರೊನಾ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತ: ಸುಮಲತಾ…

ಹುಬ್ಬಳ್ಳಿ ತಲುಪಿದ ವಿವಿಧ ಜಿಲ್ಲೆಗಳ ಜನರು!!

ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ…