ಶ್ರೀನಗರ: ಬುಧವಾರ ರಾತ್ರಿ 9ಕ್ಕೆ ಜಮ್ಮು-ಕಾಶ್ಮೀರದ ಬಿಜೆಪಿ ನಾಯಕ ಶೇಖ್ ವಾಸೀಂ ಬಾರಿ, ಆತನ ತಂದೆ ಮತ್ತು ಸಹೋದರನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ.

ಹೊಸ ಕೇಂದ್ರಾಡಳಿತ ಪ್ರದೇಶದ ಬಂದಿಪೋರ್ ನಲ್ಲಿ ಘಟನೆ ನಡೆದಿದೆ. ರಾತ್ರಿ 9ರ ಸುಮಾರಿಗೆ ಸ್ಥಳೀಯ ಪೊಲೀಸ್ ಠಾಣೆಯ ಸಮೀಪದ ಅಂಗಡಿ ಎದುರು ಕುಳಿತಿದ್ದ ವಾಸೀಂ ಕುಟುಂಬದ ಸದಸ್ಯರ ಮೇಲೆ ಉಗ್ರರು ದಾಳಿ ನಡೆಸಿದರು.
ವಾಸೀಂ, ಅವರ ತಂದೆ ಬಶೀರ್ ಅಹ್ಮದ್, ಸಹೋದರ ಉಮರ್ ಬಶೀರ್ ತಲೆಗೆ ಗುಂಡಿಕ್ಕಿ ಪರಾರಿಯಾದರು. ತಕ್ಷಣ ಬಂದಿಪೋರ್ ಜಿಲ್ಲಾಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೇ ಮೂವರೂ ನಿಧನರಾಗಿದ್ದಾರೆ.

ಇದನ್ನು ಭದ್ರತಾ ವೈಫಲ್ಯ ಎನ್ನಲಾಗಿದೆ. ‘ವಾಸೀಂ ಅವರಿಗೆ ಸರಕಾರ ಭದ್ರತೆ ನೀಡಿದ್ದು, ದಾಳಿ ವೇಳೆ ಎಲ್ಲ ಎಂಟೂ ಗಾರ್ಡ್ ಗಳು ಸ್ಥಳದಲ್ಲಿ ಇರಲಿಲ್ಲ. ಅವರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಐಜಿಪಿ ವಿನಯಕುಮಾರ್ ಹೇಳಿದ್ದಾರೆ.

‘ರಾತ್ರಿಯೇ ಪ್ರಧಾನಿ ಫೋನ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ’ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಜೆ.ಪಿ.ನಡ್ಡಾ, ರಾಮ್ ಮಾಧವ್, ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿ ಕೃತ್ಯವನ್ನು ಖಂಡಿಸಿದ್ದಾರೆ.

Leave a Reply

Your email address will not be published.

You May Also Like

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ.

ಗದಗ: ಜಿಮ್ಸ್ ನಲ್ಲಿ ರೋಗಿ ಆತ್ಮಹತ್ಯೆ..!

ಲಿವರ್ ವೈಫಲ್ಯದಿಂದ ಬಳಲುತ್ತಿರುವ ರೋಗಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಲಾಕ್ ಡೌನ್: ಡಿಸಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ…

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.