ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ.

ಬೆಂಗಳೂರು:ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00  ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್  ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. 

ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…