ಗದಗ: ಜಿಲ್ಲೆಯಲ್ಲಿಂದು 40 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 302 ಕ್ಕೆ ಏರಿಕೆಯಾಗಿದೆ. ಒಟ್ಟು 163 ಕೇಸ್ ಬಿಡುಗಡೆಯಾಗಿದ್ದು 130 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಈಗಾಗಲೇ ದಿನದಿಂದ ದಿನಕ್ಕೆ ಗದಗ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಇನ್ನು ನಗರಕ್ಕೆ ಸೀಮಿತವಾಗಿದ್ದ ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸಿದ್ದು ತೀವ್ರ ಆತಂಕ ಸೃಷ್ಟಿಸಿದೆ. ತಿಂಗಳ ಅಂಕಿ ಸಂಖ್ಯೆಯನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಸೋಂಕಿತರು ಈ ತಿಂಗಳಲ್ಲಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧ

ಗದಗ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.

ಗದಗ-ಬೆಟಗೇರಿಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳು

ಕೋವಿಡ್ ಸೋಂಕಿನ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲಾಡಳಿತ ನೀಡಿದ ಕೊವಿಡ್-19 ರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಏ.1 ರಂದು ಹೋಳಿ ಹಬ್ಬವನ್ನು ಶಾಂತ ರೀತಿಯಲ್ಲಿ ಸರಳವಾಗಿ ಆಚರಿಸಲು ಡಿವೈಎಸ್‌ಪಿ ಎಸ್.ಕೆ.ಪ್ರಲ್ಹಾದ ತಿಳಿಸಿದ್ದಾರೆ.