ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ  ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.

ಗದಗ:  ಮದುವೆಗೆ ಅನುಮತಿ ಕೊಡುವಾಗಲೂ ಇಂತಿಷ್ಟೇ ಜನ ಇರಬೇಕೆಂದು ನಿಗದಿಗೊಳಿಸಿ ಷರತ್ತುಬದ್ಧ ಅನುಮತಿ ನೀಡಲಾಗುತ್ತಿದೆ. ಕೋರೊನಾ ಸೋಂಕು ನಿಯಂತ್ರಣಕ್ಕೆ ಅದು ಅಗತ್ಯವೂ ಹೌದು. ಆದರೆ, ರಾಜಕಾರಣಿಗಳು ಅಲ್ಲಲ್ಲಿ ಪಾರ್ಟಿ-ಆಚರಣೆ  ಮಾಡಿದ ವಿಡಿಯೋಗಳು ವೈರಲ್ ಆಗುತ್ತಲೇ ಬಂದಿದ್ದವು.

ಕಳೆದ  ಶುಕ್ರವಾರ ಜುಲೈ 10ರಂದು ನಗರದ ಶ್ರೀನಿವಾಸ ಭವನದಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಆಪ್ತ ಶಿವನಗೌಡರು ಕೋವಿಡ್ ಸಂದರ್ಭದ 144 ಕಲಂ ಉಲ್ಲಂಘಿಸಿ ಭರ್ಜರಿ ಪಾರ್ಟಿ ನಡೆಸಿದ್ದರು. ಇದರ ವಿಡಿಯೋ ಟಿವಿ ಮಾದ್ಯಮ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರಿಂದ ಮುಜುಗರಕ್ಕೆ ಒಳಗಾದ ಬಿಜೆಪಿ ಶಿವನಗೌಡರ ಮೇಲೆ ಕ್ರಮ ಕೈಗೊಂಡಿದೆ.

ರಾಜ್ಯ ಬಿಜೆಪಿಯ ಆದೇಶದಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟರ್ ಅವರು ಶಿವನಗೌಡ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ.

ಹುಟ್ಟುಹಬ್ಬ ಆಚರಣೆಗೆ ಯಾವುದೇ ಅನುಮತಿ ಪಡೆಯದೇ 144 ಕಲಂ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ವಿಪತ್ತು ನಿರ್ವಹಣಾ ಕಾಯ್ದೆಯ  ಐಪಿಸಿ  ಕಲಂ 188ರ ಅಡಿಯಲ್ಲಿ  ಕೋರ್ಟಿಗೆ ಸ್ವಯಂ ದೂರು ದಾಖಲಿಸಿದ್ದರು. ಭಾನುವಾರ ಕೋರ್ಟ್ ರಜೆ ಇದ್ದ ಕಾರಣ ಇಂದು ಸೋಮವಾರ ಶಿವನಗೌಡರನ್ನು ವಿಚಾರಣೆಗೆ ಕರೆಯಬಹುದು ಎನ್ನಲಾಗಿದೆ.

 ಈ ವಿಚಾರಕ್ಕೆ ಸಂಬಂಧಿಸಿದಂತೆ 6 ಜನ ಹಾಗೂ ಇತರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಗದಗ ಎಸ್.ಪಿ ಎನ್.ಯತೀಶ್ ತಿಳಿಸಿದ್ದಾರೆ. ಇತ್ತಿಚೆಗಷ್ಟೆ ಅದ್ಧುರಿ ಮೆರವಣಿಗೆಯೊಂದರಲ್ಲಿ ಭಾಗವಹಿಸಿ ಸ್ವತಃ ಆರೋಗ್ಯ ಸಚಿವರೇ ಕೋವಿಡ್ ನಿಮಯ ಉಲ್ಲಂಘನೆಯ ಆರೋಪಕ್ಕೆ ಗುರಿಯಾಗಿದ್ದರು. ಆದರೆ ಇದೀಗ ಅವರ ಆಪ್ತನಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ.

Leave a Reply

Your email address will not be published. Required fields are marked *

You May Also Like

ಮಸ್ಕಿ: ಚನ್ನಬಸವ ಕುಟುಂಬಕ್ಕೆ ಸಹಾಯಧನ ವಿತರಣೆ

ಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ಚನ್ನಬಸವ ಮಡಿವಾಳ ಅವರ ಮನೆಗೆ ತುಂಗಾಭದ್ರ ಕಾಡಾ ಅಧ್ಯಕ್ಷ ಆರ್ ಬಸನಗೌಡ ತುರವಿಹಾಳ ಅವರ ಭೇಟಿ ನೀಡಿ ಅವರ ಕುಟುಂಬಕ್ಕೆ 50 ಸಾವಿರ ಸಹಾಯಧನ ನೀಡಿದರು. ಬಳಿಕ‌ ಆರ್ ಬಸನಗೌಡ ತುರವಿಹಾಳ ಅವರು ಮಾತನಾಡಿ, ಚನ್ನಬಸವನನ್ನು ಹುಡಕಲು ತಾಲೂಕ ಆಡಳಿತ ಸಾಕಷ್ಟು ಪ್ರಯತ್ನ ಪಟ್ಟಿದೆ. ಆದರೂ ಅವರ ದೇಹ ಸಿಗಲಿಲ್ಲ. ಈ ಕುರಿತು ರಾಜ್ಯ ಸರಕಾರ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಒತ್ತಾಯ ಮಾಡುತ್ತೇನೆ ಎಂದರು.

ಹೊರಗಿನಿಂದ ಬರುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಕಡ್ಡಾಯ!

ಲಾಕ್ ಡೌನ್ ವಿನಾಯಿತಿ ಬೆನ್ನಲ್ಲಿಯೇ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಆಗಮಿಸುವ ಎಲ್ಲರನ್ನೂ 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡುವುದಾಗಿ ಆದೇಶಿಸಿದೆ.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.