ಬೆಂಗಳೂರು: ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.
ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಲ್ಲೊಂದಾದ karresults.nic.in ವೆಬ್ ಸೈಟ್ ನಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತದೆ. ಇದೇ 16ರಿಂದ ಆರಂಭವಾಗಬೇಕಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ಪ್ರಮೋಟ್ ಮಾಡಲಾಗುವುದು ಎಂದು ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.