ಬೆಂಗಳೂರು: ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಗೆ ವಿಧಿಸಿರುವ ಲಾಕ್ ಡೌನ್ ಹಿನ್ನೆಲೆ ಸಾರ್ವಜನಿಕರು ಊರು ಸೇರಲು ಪರದಾಡುತ್ತಿದ್ದಾರೆ. ಬೆಂಗಳೂರಿನಿಂದ ಇತರ ಕಡೆಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ ಮತ್ತಷ್ಟು (200) ಬಸ್ಸುಗಳನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ.

ಈಗಾಗಲೇ ಅಂದರೆ ಇಂದು ಮಧ್ಯಾಹ್ನ 1 ಗಂಟೆಯವರೆಗೆ ಒಟ್ಟು 440 ಬಸ್ಸುಗಳನ್ನು ವಿವಿಧ ಜಿಲ್ಲೆಗಳಿಗೆ ಮತ್ತು ಕೆಲವು ರಾಜ್ಯಗಳಿಗೆ ಬೆಂಗಳೂರಿನಿಂದ ಕಾರ್ಯಾಚರಣೆಗೊಳಿಸಲಾಗಿರುತ್ತದೆ. ಒಟ್ಟು 11466 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಸಕಲ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಲಾಗಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಲಾಕ್ಡೌನ್ ಘೋಷಣೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ನಮ್ಮ ಸರಕಾರ ಸಾರ್ವಜನಿಕರ ಹಿತ ರಕ್ಷಣೆಗೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ಸೂಕ್ತ ಸಹಕಾರ ನೀಡಬೇಕೆಂದು ನಾನು ಸರ್ವರಲ್ಲಿಯೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿಯೇ ಯುವತಿಯ ಅತ್ಯಾಚಾರ..!

ಕ್ಯಾರೆಂಟೈನ್ ನಲ್ಲಿಯೇ ಇಬ್ಬರು ವಲಸೆ ಕಾರ್ಮಿಕರು ಸೇರಿದಂತೆ 6 ಪುರುಷರು 18 ವರ್ಷದ ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.