ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸಹಕರಿಸಲು ಜನರಿಗೆ ಸಚಿವರ ಮನವಿ
ಗದಗ: ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಕೋರೊನಾ ವೈರಾಣು ಹರಡುವುದನ್ನು ತಡೆಗಟ್ಟಲು ಸಾವ೯ಜನಿಕರ ಸಹಕಾರ ಬಹಳ ಪ್ರಮುಖ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕಾರ ನೀಡಬೇಕೆಂದು ವಿನಂತಿಸಿದ್ದಾರೆ.
ನಿನ್ನೆ ಮುಖ್ಯಮಂತ್ರಿಗಳ ಜತೆ ನೆಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳಿಂದ ನಿರ್ದೇಶಿತಗೊಂಡಂತೆ ಜಿಲ್ಲೆಯ ಕೋರೊನಾ ಪರಿಸ್ಥಿತಿ ನಿವ೯ಹಣೆಗಾಗಿ ಇಂದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲೆಯ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಚೆ೯ ನಡೆಸಿದ ನಂತರ ಅವರು ಈ ಟ್ವೀಟ್ ಮಾಡಿದ್ದಾರೆ.