ನಟ ಧ್ರುವಾ ಸರ್ಜಾ, ಪ್ರೇರಣಾಗೂ ಕೊರೊನಾ ಪಾಸಿಟಿವ್…!

dhruva sarja

dhruva sarja

ಬೆಂಗಳೂರು : ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಸೋಂಕು ಇರುವುದು ಖಚಿತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದು ಹೇಳಿದ್ದಾರೆ.

ಅಲ್ಲದೇ, ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಈ ಹಿಂದೆ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಆದರೆ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿಯೇ ವಿಶ್ರಾಂತಿ ಪಡೆದು ಗುಣಮುಖರಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಕಳೆದ ತಿಂಗಳು ಚಿರು ಸಾವು ಕುಟುಂಬ ವರ್ಗಕ್ಕೆ ಭರಿಸಲಾಗದ ನೋವು ತಂದು ಕೊಟ್ಟಿದೆ. ಸದ್ಯ ಅರ್ಜುನ್ ಸರ್ಜಾ ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ

Exit mobile version