ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಏರುಗತಿಯಲ್ಲಿರುವ ಸಮಯದಲ್ಲಿ ಅವರು ನಡೆಸುತ್ತಿರುವ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಬೆಂಬಲಿಸಿ ಕೆಪಿಸಿಸಿ ಸರಣಿ ಟ್ವೀಟ್ ಮಾಡಿದೆ. “ಆಶಾ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾರದ ರಾಜ್ಯ ಸರ್ಕಾರವು ಜನರ ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು #SpeakUpForAshaWorkers ಹ್ಯಾಷ್ ಟ್ಯಾಗ್ ಅಡಿ ಟ್ವೀಟ್ ಮಾಡಿದೆ.

ಆಶಾ ಕಾರ್ಯಕರ್ತೆಯರನ್ನು ಎಗ್ಗಿಲ್ಲದೇ ದುಡಿಸಿಕೊಳ್ಳುತ್ತಿರುವ ರಾಜ್ಯ ಸರ್ಕಾರ ಅವರ ದುಡಿಮೆಗೆ ತಕ್ಕಂತೆ ವೇತನ ನೀಡದೇ ಅವರ ಸೇವೆಯನ್ನು ಅವಮಾನಿಸುತ್ತಿದೆ ಎಂದು ಕೆಪಿಸಿಸಿ ಆರೋಪಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಹಗಲಿರುಳು ಕೊರೊನಾ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸಿರುವುದು ಖಂಡನೀಯ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಆರಂಭಿಸಿ ಮೂರು ದಿನ ಕಳೆಯಿತು. ಅವರ ಸಮಸ್ಯೆ ಆಲಿಸಲು ರಾಜ್ಯ ಸರ್ಕಾರಕ್ಕೆ ಏನು ಸಮಸ್ಯೆ? ಎಂದು ಪ್ರಶ್ನಿಸಿದೆ.

ಅಲ್ಲದೆ, ಸರ್ಕಾರ ಘೋಷಿಸಿದ ₹1,600 ಕೋಟಿ ಪ್ಯಾಕೇಜ್ ನ ಹಣ 25% ರಷ್ಟು ಜನರಿಗೂ ತಲುಪಿಲ್ಲ. ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಕೃಷ್ಣಾ ನದಿತೀರದ ಪ್ರವಾಹಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ ಆಲಟ್೯ರಾಗಿರಲು ಸೂಚನೆ

ಉತ್ತರಪ್ರಭಆಲಮಟ್ಟ: ಕೃಷ್ಣಾ ನದಿ ತೀರದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಧಾರಾಕಾರ ಮಳೆ ಸುರಿಯುತ್ತಿದ್ದು ಆಲಮಟ್ಟಿ ಜಲಾಶಯಕ್ಕೆ…

ಕೊರೋನಾ ಸೋಂಕು: ದಿಗಿಲು ಮೂಡಿಸಿದ WHO ಸಂದೇಶ..!

ಕರೋನಾ ಸೋಂಕು ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ವಿಶ್ವಕ್ಕೆ ಕಳುಹಿಸಿರುವ ಸಂದೇಶ ಜಗತ್ತಿಗೆ ಧಿಗಿಲು ಮೂಡಿಸುವಂತಿದೆ.

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…