ರಂಗಭೂಮಿಗೆ ಚೈತನ್ಯ ನೀಡಿ ತಮ್ಮದೇ ಛಾಪು ಮೂಡಿಸಿದ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಬಳ್ಳಾರಿ: ದ್ರೌಪದಿ ಮತ್ತು ಹೇಮರಡ್ಡಿ ಮಲ್ಲಮ್ಮ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಪಡೆದಿದ್ದ ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ಬುಧವಾರ ರಾತ್ರಿ 11.30ಕ್ಕೆ ಬಳ್ಳಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಅವರು ಇಬ್ಬರು ಪುತ್ರಿಯರು, ಒಬ್ಬ ಪುತ್ರನನ್ನು ಅಗಲಿದ್ದಾರೆ. ಹಂಪಿ ವಿವಿಯ ನಾಡೋಜ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಸುಭದ್ರಮ್ಮ ಭಾಜನರಾಗಿದ್ದಾರೆ. ಇಂದು ಮಧ್ಯಾಹ್ನ 3ಕ್ಕೆ ಅವರ ಅಂತ್ಯಕ್ರಿಯೆ ಜರುಗಲಿದೆ.