ಹೈದರಾಬಾದ್ : ಬಾಹುಬಲಿ ಖ್ಯಾತಿಯ ಪ್ರಭಾಸ್ ಅವರಿಗೆ ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ  ಜೋಡಿಯಾಗುತ್ತಿದ್ದಾರೆ.

ಪ್ರಭಾಸ್ ಜೊತೆ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ ಎಂಬ ಮಾತುಗಳು ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿವೆ. ತೆಲುಗು ಚಲನಚಿತ್ರ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಸಿನಿಮಾನಿರ್ಮಿಸುತ್ತಿದ್ದು, ಪ್ರಭಾಸ್ ಮತ್ತು ದೀಪಿಕಾ ಒಟ್ಟಿಗೆ ಅಭಿನಯಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. 

ಮೊದಲ ಬಾರಿಗೆ ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ತೆರೆಯ ಮೇಲೆ ಬರಲು ಸಿದ್ಧರಾಗಿದ್ದಾರೆ. ಹೀಗಾಗಿ ಟಾಪ್ ನಾಯಕ ಹಾಗೂ ನಾಯಕಿಯ ಅಭಿನಯ ನೋಡಲು ಅಭಿಮಾನಿಗಳು ಉತ್ಸುಕರಾಗಿ ಕಾಯುತ್ತಿದ್ದಾರೆ. 

ಇತ್ತೀಚೆಗಷ್ಟೆ ಪ್ರಭಾಸ್ ಅಭಿನಯದ 20ನೇ ಸಿನಿಮಾವಾಗಿರುವ ರಾಧೆ ಶ್ಯಾಮ್  ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಈಗ ಪ್ರಭಾಸ್ ಅವರ 21ನೇ ಸಿನಿಮಾದಲ್ಲಿ ನಾಯಕಿ ದೀಪಿಕಾ ಪಡುಕೋಣೆ ಎಂಬುದನ್ನು ರಿವೀಲ್ ಮಾಡುವ ಮೂಲಕ ಅಭಿಮಾನಿಗಳಿಗೆ ಮತ್ತೊಂದು ಬಿಗ್ ಸಪ್ರ್ರೈಸ್ ನೀಡಿದಂತಾಗಿದೆ. ಈ ಹಿಂದೆಯೇ ಈ ವಿಚಾರವಾಗಿ ಚಿತ್ರತಂಡ ದೀಪಿಕಾ ಪಡುಕೋಣೆ ಅವರನ್ನು ಸಂಪರ್ಕ ಮಾಡಿ ಮಾತುಕತೆ ನಡೆಸಿತ್ತು. ಆದರೆ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಇದೀಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಮಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಯಾಗಿದೆ.

ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ನಿರ್ದೇಶನದತ್ತ ಕೈ ಹಾಕಿದ ಮಾಣಿಕ್ಯ ನಟಿ ವರಲಕ್ಷ್ಮೀ!

ಬೆಂಗಳೂರು : ಕನ್ನಡದಲ್ಲಿ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದಾಗಿದ್ದ ಮಾಣಿಕ್ಯ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ವರಲಕ್ಷ್ಮೀ ಈಗ ನಿರ್ದೇಶಕರಾಗಿ ಅವತಾರ ಎತ್ತಿದ್ದಾರೆ.