ಮುಂಬಯಿ : ನೀವು ನನ್ನ ಪೂರ್ಣಗೊಳಿಸಿದ್ದೀರಿ ಎಂದು ಭಾರತ ಕ್ರಿಕೆಟ್ ತಂಡದ ಆಲ್ರೌಂವಡರ್ ಹಾರ್ದಿಕ್ ಪಾಂಡ್ಯ ಅವರ ಗೆಳತಿ ನತಾಶಾ ಸ್ಟಾಂಕೋವಿಕ್ ಹೇಳಿದ್ದಾರೆ.

ಪಾಂಡ್ಯ ತಂದೆಯಾಗುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಲಾಕ್ಡೌೆನ್ ಸಮಯದಲ್ಲಿ ತಮ್ಮ ಗೆಳತಿ ನತಾಶಾರೊಂದಿಗೆ ಅವರು ಸಮಯ ಕಳೆಯುತ್ತಿದ್ದಾರೆ. ನತಾಶಾ ಅವರು ಕೂಡ ಗರ್ಭಿಣಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ತನ್ನ ಪ್ರಿಯಕರ ಹಾರ್ದಿಕ್ ಪಾಂಡ್ಯ ಜೊತೆ ಇರುವ ಒಂದು ರೊಮ್ಯಾಂಟಿಕ್ ಫೋಟೋವನ್ನು ಇನ್ಸ್ಟಾಳಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋಗೆ ನತಾಶಾ, ನೀವು ನನ್ನನ್ನು ಪೂರ್ಣಗೊಳಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್ಸ್ಟಾ ದಲ್ಲಿ ಗೆಳತಿ ನತಾಶಾರೊಂದಿಗೆ ಇರೋ ಫೋಟೋವನ್ನು ಪೋಸ್ಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ, ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂದವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ ಎಂದು ಬರೆದುಕೊಂಡಿದ್ದರು.

Leave a Reply

Your email address will not be published. Required fields are marked *

You May Also Like

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಅಗತ್ಯ ಪ್ರೋ. P. S. ಅಣ್ಣಿಗೇರಿ

ನರಗುಂದ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಶ್ರೀ ಸಿದ್ದೇಶ್ವರ ಪ್ರಥಮ ದರ್ಜೆ ಕಾಲೇಜು ನರಗುಂದ ಕಾಲೇಜಿನಲ್ಲಿ…

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…

ಅಸಾಧ್ಯ ಎಂಬುವುದು ಯಾವುದೂ ಇಲ್ಲ..! ಪಂಜಾಬ್ – ರಾಜಸ್ಥಾನ್ ಮ್ಯಾಚ್ ನೋಡಿದವರಿಗೆ ಹೀಗೆ ಅನಿಸಲೇಬೇಕು!

ಕ್ರಿಕೆಟ್ ಅಂಗಳದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ 400ಕ್ಕೂ ಅಧಿಕ ರನ್ ಟಾರ್ಗೆಟ್ ನೀಡಿದ್ದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ಗೆದ್ದಂತೆ ಇಲ್ಲಿ ಪಂಜಾಬ್ ನ್ನು ಮಣಿಸಿ ರಾಜಸ್ಥಾನ್ ಗೆದ್ದು ಬೀಗಿದೆ.