ಮುಂಬಯಿ : ನೀವು ನನ್ನ ಪೂರ್ಣಗೊಳಿಸಿದ್ದೀರಿ ಎಂದು ಭಾರತ ಕ್ರಿಕೆಟ್ ತಂಡದ ಆಲ್ರೌಂವಡರ್ ಹಾರ್ದಿಕ್ ಪಾಂಡ್ಯ ಅವರ ಗೆಳತಿ ನತಾಶಾ ಸ್ಟಾಂಕೋವಿಕ್ ಹೇಳಿದ್ದಾರೆ.

ಪಾಂಡ್ಯ ತಂದೆಯಾಗುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಲಾಕ್ಡೌೆನ್ ಸಮಯದಲ್ಲಿ ತಮ್ಮ ಗೆಳತಿ ನತಾಶಾರೊಂದಿಗೆ ಅವರು ಸಮಯ ಕಳೆಯುತ್ತಿದ್ದಾರೆ. ನತಾಶಾ ಅವರು ಕೂಡ ಗರ್ಭಿಣಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಆಗಾಗ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ತನ್ನ ಪ್ರಿಯಕರ ಹಾರ್ದಿಕ್ ಪಾಂಡ್ಯ ಜೊತೆ ಇರುವ ಒಂದು ರೊಮ್ಯಾಂಟಿಕ್ ಫೋಟೋವನ್ನು ಇನ್ಸ್ಟಾಳಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ಫೋಟೋಗೆ ನತಾಶಾ, ನೀವು ನನ್ನನ್ನು ಪೂರ್ಣಗೊಳಿಸಿದ್ದೀರಿ ಎಂದು ಬರೆದುಕೊಂಡಿದ್ದಾರೆ.

ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್ಸ್ಟಾ ದಲ್ಲಿ ಗೆಳತಿ ನತಾಶಾರೊಂದಿಗೆ ಇರೋ ಫೋಟೋವನ್ನು ಪೋಸ್ಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ, ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂದವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ ಎಂದು ಬರೆದುಕೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಯುವರಾಜ್ ಸಿಂಗ್ ಗೆ ಮೋಸ ಮಾಡಿದವರು ಯಾರು?

ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಜನ ಚುರಿ ಹಾಕಿದ್ದಾರೆ ಎಂದು ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ್ದಾರೆ. ಹಾಗಾದ್ರೆ ಯುವಿ ಬೆನ್ನಿಗೆ ಚೀರಿಹಾಕಿದವರು ಯಾರು ಎನ್ನುವುದೇ ಇಲ್ಲಿ ಮುಖ್ಯ ಪ್ರಶ್ನೆ.

ಇಂದು ಬಿಸಿಸಿಐ ಸಭೆ: ಐಪಿಎಲ್ ಮತ್ತೆ ಮೈದಾನಕ್ಕೆ?

ಕೋರೊನಾ ಬಿಕ್ಕಟ್ಟಿನ ಕಾರಣಕ್ಕೆ ಕ್ರಿಕೆಟ್ ಮಲಗಿದೆ. ತಿಂಗಳುಗಳ ನಂತರ ಇಂದು ಬಿಸಿಸಿಐ ಮಹತ್ವದ ಸಭೆ ನಡೆಸುತ್ತಿದ್ದು,…

ಚೆನ್ನೈ ವಿರುದ್ಧ ಆರ್ ಸಿಬಿ ಸೋಲಲು ಇವರೇ ಕಾರಣವಂತೆ!

ದುಬೈ : ಗೆಲ್ಲುವ ಫೇವರಿಟ್ ತಂಡವಾಗಿದ್ದ ಆರ್ ಸಿಬಿಯು ಚೆನ್ನೈ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಇದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…