ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ. ಯಾದವ್ ಈ ಕುರಿತಾಗಿ ಹೇಳಿಕೆ ನೀಡಲು ಬಿಜೆಪಿ ಹಿರಿಯ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ದಿನಾಂಕ ನಿಗದಿ ಮಾಡಿದ್ದಾರೆ.

ಜುಲೈ 23ರಂದು ಜೋಶಿ ಮತ್ತು 24ರಂದು ಅದ್ವಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಜುಲೈ 22ರಂದು ಶಿವಸೇನಾದ ಮಾಜಿ ಸಂಸದ ಸತೀಶ್ ಪ್ರಧಾನ್ ಹೇಳಿಕೆ ದಾಖಲು ಮಾಡಲಿದ್ದಾರೆ.

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಪ್ರಕರಣದಲ್ಲಿ ಈ ಮೂವರು ವಿಚಾರಣೆ ಎದುರಿಸುತ್ತಿದ್ದು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅನಾರೋಗ್ಯದಿಂದ ಮೃತಪಟ್ಟ ಪೊಲೀಸ್ ಪೇದೆಗೂ ಕೊರೊನಾ!

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.

ಪಾಕ್ ಸೇನೆಯಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದರು.

ಕೊರೊನಾದ ಮಧ್ಯೆಯೂ ಸಂಗ್ರಹವಾದ ಜಿಎಸ್ ಟಿ ಮೊತ್ತ ಎಷ್ಟು ಗೊತ್ತಾ?

ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು…