ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ. ಯಾದವ್ ಈ ಕುರಿತಾಗಿ ಹೇಳಿಕೆ ನೀಡಲು ಬಿಜೆಪಿ ಹಿರಿಯ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ದಿನಾಂಕ ನಿಗದಿ ಮಾಡಿದ್ದಾರೆ.

ಜುಲೈ 23ರಂದು ಜೋಶಿ ಮತ್ತು 24ರಂದು ಅದ್ವಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಜುಲೈ 22ರಂದು ಶಿವಸೇನಾದ ಮಾಜಿ ಸಂಸದ ಸತೀಶ್ ಪ್ರಧಾನ್ ಹೇಳಿಕೆ ದಾಖಲು ಮಾಡಲಿದ್ದಾರೆ.

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಪ್ರಕರಣದಲ್ಲಿ ಈ ಮೂವರು ವಿಚಾರಣೆ ಎದುರಿಸುತ್ತಿದ್ದು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಏರಿಕೆ?

ನವದೆಹಲಿ: 2021 ರ ಆರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಜನವರಿ 2021 ರಿಂದ ಅನ್ವಯವಾಗುವಂತೆ, ತುಟ್ಟಿ…