ವಿವಾದ ಮೈಮೇಲೆ ಎಳೆದುಕೊಂಡ ಇಂಗ್ಲೆಂಡ್ ಆಟಗಾರ

england

england cricket

ಮ್ಯಾಂಚೆಸ್ಟರ್ : ಕೊರೊನಾ ಅಬ್ಬರದ ಮಧ್ಯೆಯೂ ಇಂಗ್ಲೆಂಡ್ನರಲ್ಲಿ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿವೆ. ಆದರೆ, ಆರಂಭದಲ್ಲಿಯೇ ಕಳಂಕವೊಂದು ಇದಕ್ಕೆ ಮೆತ್ತಿಕೊಂಡಿದೆ.

ಆದರೆ ಇಂಗ್ಲೆಂಡ್ ಕ್ರಿಕೆಟಿಗ ಡೊಮಿನಿಕ್ ಸಿಬ್ಲಿ ಪಂದ್ಯದ ನಡುವೆ ಚೆಂಡಿಗೆ ಸಲೈವಾ (ಎಂಜಲು) ಉಜ್ಜಿದ್ದಾರೆ. ಈ ಮೂಲಕ ಐಸಿಸಿ ಜಾರಿ ಮಾಡಿದ್ದ ಹೊಸ ನಿಯಮವನ್ನು ಉಲ್ಲಂಘಿಸಿದ ಮೊದಲ ಆಟಗಾರ ಎಂಬ ಕುಖ್ಯಾತಿಗೆ ಪಾತ್ರವಾಗಿದ್ದಾರೆ.

ಕ್ರಿಕೆಟ್ನಿಲ್ಲಿ ಬೌಲರ್ ಕೈಗೆ ಚೆಂಡು ನೀಡುವ ಮುನ್ನ ಆಟಗಾರ ಚೆಂಡಿಗೆ ಎಂಜುಲು ಉಜ್ಜಿ ಚೆಂಡಿನ ಶೈನ್ ಕಾಪಾಡಿಕೊಳ್ಳುವುದು ಸಾಮಾನ್ಯ ಸಂಗತಿಯಾಗಿತ್ತು. ಆದರೆ ಕೊರೊನಾ ಕಾರಣದಿಂದ ಇತ್ತೀಚೆಗೆ ಐಸಿಸಿ ಇದಕ್ಕೆ ನಿರ್ಬಂಧ ಹೇರಿದ್ದು, ಆಟಗಾರ 2 ಬಾರಿ ಈ ನಿಯಮವನ್ನು ಉಲ್ಲಂಘಿಸಿದರೆ ತಂಡಕ್ಕೆ 5 ರನ್ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿತ್ತು.

ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವೆ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಫೀಲ್ಡರ್ ಡೊಮಿನಿಕ್ ಸಿಬ್ಲಿ ಹಲವು ದಿನಗಳ ಅಭ್ಯಾಸದಂತೆ ಚೆಂಡು ಕೈಗೆ ಬರುತ್ತಿದಂತೆ ಎಂಜಲು ಉಜ್ಜಿ ನಿಯಮ ಉಲ್ಲಂಘಿಸಿದ್ದಾರೆ. ಕೂಡಲೇ ತಮ್ಮ ತಪ್ಪನ್ನು ಅರಿತ ಸಿಬ್ಲೆ ಫೀಲ್ಡ್ ಅಂಪೈರ್ ಗೆ ಮಾಹಿತಿ ನೀಡಿದ್ದರು. ತಕ್ಷಣ ಅಂಪೈರ್ ಚೆಂಡನ್ನು ಸ್ಯಾನಿಟೈಸ್ ಮಾಡಿ ಪಂದ್ಯವನ್ನು ಪುನರ್ ಆರಂಭಿಸಿದ್ದರು.

ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಟೆಸ್ಟ್ ಪಂದ್ಯ ನಡೆಯುತ್ತಿದೆ. ಗುರುವಾರ ಆರಂಭವಾದ ಪಂದ್ಯದಲ್ಲಿ ಟಾಸ್ ಸೋತ ಇಂಗ್ಲೆಂಡ್ ಬ್ಯಾಟಿಂಗ್ ಆರಂಭ ಮಾಡುವ ಅವಕಾಶ ಪಡೆದು 9 ವಿಕೆಟ್‌ ಕಳೆದುಕೊಂಡು 469 ರನ್‌ ಗಳಿಸಿದ್ದಾಗ ಡಿಕ್ಲೇರ್‌ ಮಾಡಿಕೊಂಡಿತ್ತು.

ಮೊದಲ ಇನ್ನಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ಭಾನುವಾರ 287 ರನ್ಗಕಳಿಗೆ ಆಲೌಟ್ ಆಗಿತ್ತು. 182 ರನ್ ಮುನ್ನಡೆ ಪಡೆದ ಇಂಗ್ಲೆಂಡ್ ಭಾನುವಾರ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 3 ರನ್ ಗಳಿಸಿ 219 ರನ್ಗ ಳಿಗೆ ಮುನ್ನಡೆಯನ್ನು ಹೆಚ್ಚಿಸಿದೆ.

Exit mobile version