ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

SSLC Result Karnataka

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

220 ಮೌಲ್ಯಮಾಪನ ಕೇಂದ್ರಗಳ ಪೈಕಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ.

ಬೆಂಗಳೂರು: ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಬೆಂಗಳೂರಿನಲ್ಲಿ ಕೋವಿಡ್ ಆತಂಕದಿಂದ ಶೇ. 45ರಷ್ಟು ಮೌಲ್ಯಮಾಪಕರು ಗೈರಾಗಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಸುರಕ್ಷಿತ ವಾತಾವರಣ ಕಲ್ಪಿಸಲಾಗಿದೆ. ಇನ್ನು 10 ದಿನದಲ್ಲಿ ಮೌಲ್ಯಮಾಪನ  ಸಂಪೂರ್ಣ ಮುಗಿಯಲಿದ್ದು, ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Exit mobile version