ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ನಟ ದರ್ಶನ್ ನಾಡಿನ ಜನತೆಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ದೇಶದಲ್ಲಿ ಇಂದು ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನತೆಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆಗಷ್ಟ್ 15 ಎಂಬುವುದು ಭಾರತೀಯರ ಸುದಿನ. ಈ ಶುಭ ದಿನವನ್ನು ನಾವು ಹೆಮ್ಮೆಯಿಂದ ಆಚರಿಸಬೇಕು. ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು. ಸರ್ವರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ಇದಕ್ಕೂ ಮೊದಲು ದಚ್ಚು ಅವರು, ಸಂಗೋಳ್ಳಿ ರಾಯಣ್ಣ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 222ನೇ ಜಯಂತ್ಯೋತ್ಸವದ ಮತ್ತು 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಿತ್ರಮಂದಿರಗಳಿಗೆ ನಿರ್ಬಂಧ ಬೇಡ : ಪುನೀತ್ ಮನವಿ

ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸೂಪರ್ ಸ್ಟಾರ್ ಚಿತ್ರ ತಂಡದ ಗಿಫ್ಟ್ ಏನು ಗೊತ್ತಾ?

ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರಕ್ಕೆ ನಟ ಯಶ್ ಸಾಥ್ ನೀಡಿದ್ದಾರೆ. ನಿರಂಜನ್ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಸೂಪರ್ ಸ್ಟಾರ್ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿತ್ತು. ಈ ಸಮಾರಂಭದಲ್ಲಿ ನಟ ಉಪೇಂದ್ರ ಹಾಗೂ ಪ್ರಿಯಾಂಕ್ ಉಪೇಂದ್ರ ಭಾಗಿಯಾಗಿದ್ದರು.

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.