ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published.

You May Also Like

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಒಂದು ವರ್ಷದವರೆಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಉಲ್ಲಂಘನೆಗೆ 10 ಸಾವಿರ ದಂಡ

ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ…

ದೇಶದಲ್ಲಿ 240ಕ್ಕೂ ಹೆಚ್ಚು ಸೋಂಕು ಪತ್ತೆ

ದೇಶದಲ್ಲಿ ರೂಪಾಂತರಿ ಕೊರೊನಾ ಸೋಂಕು ಹೆಚ್ಚು ಸಾಂಕ್ರಾಮಿಕವಾಗಬಹುದು ಎಂದು ಏಮ್ಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಅನ್ಲಾಕ್-2 ಮಾರ್ಗಸೂಚಿ ಬಿಡುಗಡೆ!: ಏನಿರುತ್ತೆ, ಏನಿರಲ್ಲ

ನವದೆಹಲಿ : ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು,…