ಗದಗ: ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.
 
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.

ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಶನ್, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಪಡೆಯಬೇಕು. ಒಂದು ವಾರ್ಡಿಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸಬೇಕು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಏಕಕಾಲದಲ್ಲಿ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅವಕಾಶ ಮಾಡುವುದು.
ಗಣೇಶ ಮೂರ್ತಿ ಪ್ರತಿಷ್ಟಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆಯನ್ನು  ಸಂಪೂರ್ಣವಾಗಿ ನಿರ್ಬಂಧಿಸಿದೆ.

ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು ಮತ್ತು ಸರ್ಕಾರಿ/ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಟಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ಜಿಲ್ಲಾಡಳಿತ/0ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರಗಳಲ್ಲಿ ವಿಸರ್ಜಿಸಬೇಕು.

ಇದನ್ನೂ ಓದಿ:ಹೆಚ್ಚಿನ ದರದಲ್ಲಿ ಗೊಬ್ಬರ ಮಾರಾಟ: ಗದಗ ಜಿಲ್ಲೆಯ ಕೃಷಿ ಪರಿಕರ ಮಾರಾಟ ಮಳಿಗೆಗಳ ಪರವಾನಿಗೆ ಅಮಾನತು


ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯದ ಸ್ಯಾನಿಟೈಜೆಷನ್ ಮಾಡುವುದು. ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ 6 ಅಡಿ ಸಾಮಾಜಿಕ ಅಂತರ ಗುರುತಿಸುವುದು. ಋರ್ಮಲ್ ಸ್ಕ್ರೀನಿಂಗ್ ಮಾಡುವುದು. ಕಡ್ಡಾಯವಾಗಿ ಭಕ್ತಾಧಿಗಳು ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ಮಾರ್ಗಸೂಚಿಗಳನ್ನು ನೀಡಿದೆ ಅದರಂತೆ ಪ್ರಸಕ್ತ ವರ್ಷದ ಗಣೇಶೋತ್ಸವ ಆಚರಣೆಯನ್ನು ಸಾರ್ವಜನಿಕರು ಸರಳವಾಗಿ ಆಚರಿಸಬೇಕು.

Leave a Reply

Your email address will not be published. Required fields are marked *

You May Also Like

ಹಿರಿಯ ಅಭಿಮಾನಿ ಭೇಟಿ ಮಾಡಿ ಭಾವುಕರಾದ ಅಪ್ಪು!

ಕಾರವಾರ : ತಮ್ಮ ನೆಚ್ಚಿನ ನಾಯಕ ನಟನಿಗಾಗಿ ಹಿರಿಯ ಜೀವವೊಂದು ಬರೋಬ್ಬರಿ 12 ವರ್ಷಗಳಿಂದ ಕಾಯುತ್ತಿತ್ತು. ಕೊನೆಗೂ ಶಬರಿಗೆ, ಅಯ್ಯಪ್ಪನ ದರ್ಶನವಾದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ತಮ್ಮ ಅಭಿಮಾನಿಗೆ ಭೇಟಿಯಾಗಿದ್ದಾರೆ.

ಅತಿಥಿ ಉಪನ್ಯಾಸಕರಿಗೆ 3 ತಿಂಗಳ ವೇತನ ನೀಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…