ಬೆಂಗಳೂರು: ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಖ್ಯಾತ ಸಾಹಿತಿ, ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ವಿಷಯ ಮಂಡನೆ: ಸೇವಾ ಭದ್ರತೆ- ಸರ್ಕಾರ ಅನುಸರಿಸಬಹುದಾದ ಕ್ರಮಗಳು ಎಂಬ ವಿಷಯವಾಗಿ ಕರ್ನಾಟಕ ಉಚ್ಚ ನ್ಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ವಿಷಯ ಮಂಡಿಸಲಿದ್ದಾರೆ. ಹಿರಿಯ ಆರ್ಥಿಕ ತಜ್ಞ ಪ್ರೊ.ಟಿ.ಆರ್.ಚಂದ್ರಶೇಖರ ಉನ್ನತ ಶಿಕ್ಷಣ ಪದವೀಧರರು ಮತ್ತು ವಿವಿಗಳಲ್ಲಿ ಉದ್ಯೋಗಾವಕಾಶಗಳು ಎಂಬ ವಿಷಯವಾಗಿ ಮಾತನಾಡಲಿದ್ದಾರೆ.

ಪ್ರಜಾವಾಣಿ ದಿನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಅವರು ಉನ್ನತ ಶಿಕ್ಷಣ ಪದವೀಧರರ ನಿರುದ್ಯೋಗ- ಸಮೂಹ ಮಾಧ್ಯಮಗಳ ಪಾತ್ರ ಎಂಬ ವಿಷಯ ಮಂಡಿಸಲಿದ್ದು, ಸಾಮಾಜಿಕ ಚಿಂತಕ ಬಿ.ರಾಜಶೇಖರ ಮೂರ್ತಿ ಸೇವಾ ಭದ್ರತೆ- ಉಪನ್ಯಾಸಕರು ಮುಂದಿಡಬೇಕಾದ ಹೆಜ್ಜೆಗಳು ಎಂಬುದಾಗಿ ವಿಚಾರ ಮಂಡನೆ ಮಾಡಲಿದ್ದಾರೆ.

ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ವಿವಿಗಳ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ/ ಅರೆಕಾಲಿಕ/ ತಾತ್ಕಾಲಿಕ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಾಹ್ನ 2.25 ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲಾಗಿನ್ ಆಗಬೇಕಾಗಿ ಕರ್ನಾಟಕ ವಿವಿಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಪ್ರಕಟಣೆ ತಿಳಿಸಿದೆ.

1 comment
Leave a Reply

Your email address will not be published. Required fields are marked *

You May Also Like

ಶುದ್ಧ ನೀರು ಪೂರೈಕೆಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಒತ್ತಾಯ

ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್‌ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ.

ಶಾರ್ಟ್ ಸರ್ಕ್ಯೂಟ್: ಭಾರತ್ ಗ್ಯಾಸ್ ವಿತರಣಾ ಕಚೇರಿಯಲ್ಲಿ ಬೆಂಕಿ!

ಶಾರ್ಟ್ ಸರ್ಕ್ಯೂಟ್ ನಿಂದ ಗ್ಯಾಸ್ ಕಚೇರಿಗೆ ಬೆಂಕಿ ಬಿದ್ದ ಘಟನೆ ಗದಗ ನಗರದಲ್ಲಿ ನಡೆದಿದೆ. ಇಲ್ಲಿನ ಭಾರತ್ ಗ್ಯಾಸ್ ಆಫೀಸಿಗೆ ಬೆಂಕಿ ಬಿದ್ದಿದ್ದು,ಯಾವುದೇ ಪ್ರಾಣ ಹಾನಿ ಸಂಭವಿಸದೇ ಭಾರಿ ಅನಾಹುತ ತಪ್ಪಿದಂತಾಗಿದೆ.

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.