ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

 ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ.

ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಕೋಳಿ ಕೇಳಿ ಮಸಾಲಿ ಅರೆದಂಗಾಯಿತು ತಹಶೀಲ್ದಾರರ ನೀತಿ..!

ಶಿರಹಟ್ಟಿ ಪಟ್ಟಣದ ಕಟ್ಟಿಗೆ ಅಡ್ಡೆಗಳ ಕಹಾನಿಯನ್ನು ಕೆದಕುತ್ತಾ ಹೋದರೆ ಅವರನ್ ಬಿಟ್ಟ್, ಇವರು ಯಾರು..? ಎನ್ನುವಂತಿದೆ.

ರಾಜ್ಯದಲ್ಲಿ PFI SDPI ಸಂಘಟನೆಗಳನ್ನ ಬ್ಯಾನ್ ಮಾಡಬೇಕು: ಬಾಬು ಬಾಕಳೆ ಆಗ್ರಹ

ಉತ್ತರಪ್ರಭ ಗದಗ: ರಾಜ್ಯದಲ್ಲಿ ಪಿ ಎಫ್ ಐ. ಎಸ್ ಡಿ ಪಿ ಐ. ಸಂಘಟನೆಗಳನ್ನ ರಾಜ್ಯ…

ಮಹಾರಾಷ್ಟ್ರದ ಜನರ ನಿದ್ದೆಗೆಡಿಸಿದ ಮಹಾಮಾರಿ!

ಮುಂಬಯಿ : ನಗರದಲ್ಲಿ ಕೊರೊನಾ ಸಮುದಾಯಿಕ ಹಂತ ತಲುಪಿದಂತಾಗಿದೆ. ಹೀಗಾಗಿ ಅಲ್ಲಿನ ಜನ ಮಹಾಮಾರಿಗೆ ತತ್ತರಿಸಿ…

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…