ಮೈಸೂರು: ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22  ಜನರ ಸಾವಿಗೆ  ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಲೆಮಹದೇಶ್ವರ ಸಮೀಪದ ಮಾರ್ಟಳ್ಳಿಯವನಾದ ಈತ ಕಳೆದ 25 ವರ್ಷಗಳಿಂದಲೂ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ. ಕೆ.ಆರ್.ಆಸ್ಪತ್ರೆಯಲ್ಲಿ ಬಿಲವೇಂದ್ರನ್, ತಡರಾತ್ರಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹತ್ತು ದಿನಗಳ ಹಿಂದೆ ಜೈಲಿನಲ್ಲಿ ಪ್ರಜ್ಞಾಶೂನ್ಯನಾಗಿದ್ದ ಈತನನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರಸಂಬಂಧಿ ಸಮಸ್ಯೆಗಳಿಂದಾಗಿ ಈತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಈತನ ಶಿಕ್ಷೆಯ ಪ್ರಮಾಣವನ್ನು ನಂತರ‌ ಜೀವಾವಧಿ‌‌‌ ಶಿಕ್ಷೆಗೆ ಪರಿವರ್ತಿಸಲಾಗಿತ್ತು.

ಇದನ್ನೂ ಓದಿ: ಕೊರೋನಾ ಹಾಗೂ ಲಾಕ್‌ಡೌನ್‌ದಿಂದ ಭಾರತದ ಅರ್ಥಿಕತೆಯ ಮೇಲಾದ ಪರಿಣಾಮ

Leave a Reply

Your email address will not be published. Required fields are marked *

You May Also Like

ಗದಗ ನಗರ ಸಭೆ ಮತ ಎಣಿಕೆ ಮುಕ್ತಾಯ :15 ಕಾಂಗ್ರೇಸ್,18 ಬಿಜೆಪಿ 2 ಪಕ್ಷೇತರರು

ಗದಗ: ನಗರ ಸಭೆ ಮತ ಎಣಿಕೆ ಮುಕ್ತಾಯ ವಾಗಿದ್ದು ಒಟ್ಟು 15 ಕಾಂಗ್ರೇಸ್  18  ಬಿಜೆಪಿ …

ಸಿಎಂ ಗಳಿಗೆ ಪಾಠ ಮಾಡುವುದರಿಂದ ಸೋಂಕು ನಿಯಂತ್ರಣವಾಗಲ್ಲ

ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.