ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ರೈತರು ಇನ್ನಿಲ್ಲದ ಹರಸಾಹಸ ಪಡಬೇಕಾಗಿತ್ತು. ಆದರೆ ರಾಜ್ಯದಲ್ಲಿ ಇಂದಿನಿಂದ ಪಶುಸಂಜೀವಿನಿ ಯೋಜನೆಯನ್ನು ಜಾರಿಗೆ ತರುವ ಮೂಲಕ ರೈತರ ಮನೆ ಬಾಗಿಲಲ್ಲೆ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸುವ ಯೋಜನೆಗೆ ಸಿಎಂ ಬಿಎಸ್ವೈ ಚಾಲನೆ ನೀಡಿದ್ದಾರೆ.  ಯೋಜನೆ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ…

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಇಂದು  ಪಶುಸಂಜೀವಿನಿ ಯೋಜನೆ ಲೋಕಾರ್ಪಣೆಗೊಳಿಸಿದರು.

ಸದ್ಯ ರಾಜ್ಯದ 15 ಜಿಲ್ಲೆಗಳಲ್ಲಿ ಮೊದಲ ಬಾರಿ ಕಾರ್ಯಾರಂಭ ಮಾಡಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಜಾನುವಾರುಗಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ  ಯೋಜನೆ ಜಾರಿಗೆ ತರಲಾಗಿದ್ದು, ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಈ ಯೋಜನೆ ಹೊಂದಿದೆ.

ಇಲಾಖೆಯ ಹೆಲ್ಪಲೈನ್ ಸೇವೆಗಳಿಗೆ ಈ ಸೇವೆಗಳನ್ನು ಲಿಂಕ್ ಮಾಡಿ 24 X 7 ಜಾನುವಾರುಗಳ ರಕ್ಷಣೆಗೆ ಕಾಳಜಿ ವಹಿಸಬೇಕಾದ ಉದ್ದೇಶ ಹೊಂದಲಾಗಿದೆ. 2019-20 ನೇ ಸಾಲಿನ ಬಜೆಟ್ ನಲ್ಲಿ ರೂ 2 ಕೋಟಿ ಸೇರಿದಂತೆ ಇಲಾಖೆಯ ಇತರೆ ಅನುದಾನವನ್ನು ಪಶು ಸಂಜೀವಿನಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ.

ಸಹಾಯವಾಣಿ

ಪಶುಪಾಲಕರ ಸಹಾಯವಾಣಿ ಸಂಖ್ಯೆ 1962 ಸಂಯೋಜಿಸಿ ಅವಶ್ಯಕ ಮತ್ತು ತುರ್ತು ಸೇವೆ ನೀಡಲು ಕ್ರಮವಹಿಸಲಾಗುತ್ತಿದೆ.

ರೈತರ ಮನೆ ಬಾಗಿಲಿಗೆ ಚಿಕಿತ್ಸೆ! ಹೀಗಿರಲಿದೆ..

 1.  ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆಯನ್ನು ನೀಡಲಿದ್ದಾರೆ.
 2. ರಾಜ್ಯದ 15 ಜಿಲ್ಲೆಗಳಲ್ಲಿ ಕಾರ್ಯಾರಂಭ|
 3.  ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಅರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕಾದ ಅನಿವಾರ್ಯತೆ ಇರುತ್ತದೆ
 4.  ವಿಷಪ್ರಾಶನ, ಪ್ರಸವಕ್ಕೆ ಸಂಭಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು.
 5.  ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ.
 6. ಮೂಕ ರೋಧನೆ ತಪ್ಪಿಸಲು ರೈತರ ಮನೆ ಬಾಗಿಲಿಗೆ ತೆರಳಿ ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರೆ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲಿವೆ.

ಯೋಜನೆ ಆರಂಭಿಸಲಾದ 15 ಜಿಲ್ಲೆಗಳ ವಿವರ:

ರಾಯಚೂರು, ಕಲುಬುರ್ಗಿ, ಧಾರವಾಡ, ಬಿಜಾಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಬೀದರ್, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪಶುವೈದ್ಯಕೀಯ ಪಾಲಿಕ್ಲಿನಿಕ್‌ಗಳಿಗೆ ನೀಡಲಾಗುತ್ತಿದೆ.

ಹೇಗಿರಲಿದೆ ಪಶು ಚಿಕಿತ್ಸಾ ವಾಹನ?

 1. ಸುಸಜ್ಜಿತ ಆಂಬ್ಯುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಸಲಾಗಿದೆ.
 2. 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಅಳವಡಿಕೆ
 3. 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರ ಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ.
 4. ವಾಶ್ ಬೇಸಿನ್, 100 w Led light, ಆಮ್ಲಜನಕ ಸಪೋರ್ಟ್ ಸಿಸ್ಟಮ್ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ (fire extinguisher) ಇದೆ.
 5. ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit)
 6. ಪ್ರಸೂತಿ ಕಿಟ್ (dystocia kit) ಗಳ ಪೆಟ್ಟಿಗೆಗಳು ಮತ್ತು ಇತರೆ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇತ್ಯಾದಿಗಳನ್ನು ಒದಗಿಸುವುದರ ಮೂಲಕ ಜಾನುವಾರುಗಳಿಗೆ ಅವಶ್ಯಕ ಹಾಗೂ ತುರ್ತು ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.

ಶಸ್ತ್ರ ಚಿಕಿತ್ಸಾ ಸೌಲಭ್ಯ

ಪಶು ಶಸ್ತ್ರಚಿಕಿತ್ಸಾ ವಾಹನವನ್ನು ಉಪಯೋಗಿಸಿಕೊಂಡು ಜಿಲ್ಲೆಯಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ರ್ತಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಬರಡುರಾಸುಗಳ ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ತಜ್ಞ ಪಶುವೈದ್ಯಕೀಯ ಸೇವೆಯನ್ನು ದೊರಕಿಸಿಕೊಡುವರು.

ಇದನ್ನೂ ಓದಿ:

1 comment
 1. ಸರ್ಕಾರದ ಈಯೋಜನೆ ರೈತರಿಗೆ ಬಹಳ ಅವಶ್ಯಕತೆ ಅದರಲ್ಲೂ ಗ್ರಾಮೀಣ ಭಾಗದ ರೈತರಿಗೆ ಯೋಜನೆ ಒಂದು ಅತ್ಯಮೂಲ್ಯವಾದದ್ದು ಆದರೆ ಸರ್ಕಾರ ಈ ಯೋಜನೆ ಕೇವಲ ಯೋಜನೆಯಾಗಿ ಉಳಿಯಬಾರದು ಏಕೆಂದರೆ ಮೊದಲು ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆ ಪ್ರತಿಯೊಂದು ಪಶು ಆಸ್ಪತ್ರೆಗಳಲ್ಲಿ ಎದ್ದು ಕಾಣುತ್ತಿದೆ ಇದನ್ನು ಮೊದಲು ಸರಿದೂಗಿ ಸಿದ್ದೆ ಆದಲ್ಲಿ ಈ ಒಂದು ಯೋಜನೆ ಯಶಸ್ವಿ ಆಗುವಲ್ಲಿ ಯಾವುದೇ ಪ್ರಶ್ನೆ ಇಲ್ಲ ಇಂತಹ ಯೋಜನೆಯನ್ನು ತಂದಿದ್ದಕ್ಕಾಗಿ ಈ ಸರ್ಕಾರಕ್ಕೆ ತಂದ ಹಿರಿಮೆಯ ಗರಿ

Leave a Reply

Your email address will not be published. Required fields are marked *

You May Also Like

ಫೇಸ್ ಬುಕ್ ಗೆಳೆಯನೊಂದಿಗೆ ಓಡಿ ಹೋದ ರಾಜಕೀಯ ಮುಖಂಡನ ಪತ್ನಿ!

ಲಕ್ನೋ : ರಾಜಕೀಯ ಮುಖಂಡರೊಬ್ಬರ ಪತ್ನಿ ಫೇಸ್‍ ಬುಕ್ ಗೆಳೆಯನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ನಗರದ ಕೊತವಾಲಿಯಲ್ಲಿ ನಡೆದಿದೆ.

ಬಳ್ಳಾರಿಯಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಅಮಾನವೀಯ ವರ್ತನೆ: 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ…

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಗದಗ ಜಿಲ್ಲೆಯಲ್ಲಿಂದು ಯಾವ ಊರಲ್ಲಿ ಎಷ್ಟು ಪಾಸಿಟಿವ್!

ಜಿಲ್ಲೆಯಲ್ಲಿ ಸೋಮವಾರ ದಿ. 20 ರಂದು 30 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಜಿಡಿಜಿ-498 ಮಲ್ಲಸಮುದ್ರ ನಿವಾಸಿ (46,ಪುರುಷ) ಹಾಗೂ ಜಿಡಿಜಿ-585 ಹುಲಕೋಟಿ