ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

sp balasubrahmanya singer

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಚೆನ್ನೈ:  ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ಕಳೆದ 17 ದಿನಗಳಿಂದ ಎಸ್ಪಿಟಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಏಳು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊರೊನಾ ವೈರಸ್ನಿಂಿದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ. ವೆಂಟಿಲೇಟರ್ ಮತ್ತು ಎಕ್ಮೋ ಮೆಷಿನ್ ಸಪೋರ್ಟ್ನಿಂ ದ ಎಸ್ಪಿಕಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತದೆ.

ಎಸ್ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

Exit mobile version