ಹುಬ್ಬಳ್ಳಿ: ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಲಾಕ್‌ಡೌನ್ ತೆರವಾದ ಆರಂಭದ ಕೆಲ ತಿಂಗಳ ಕಾಲ ಪಾಸ್ ನೀಡಿರಲಿಲ್ಲ. ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಧಾರವಾಡ, ಗದಗ , ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪಾಸ್ ನೀಡಿ ನಷ್ಟ ಕಡಿಮೆ ಮಾಡಿಕೊಳ್ಳಲು ಸಂಸ್ಥೆ ಮುಂದಾಗಿದೆ. ಈಗ ಸಧ್ಯ
ಪಾಸ್‌ಗಳನ್ನು ಪಡೆದರೆ ಪ್ರಯಾಣಿಕರಿಗೆ ಹಣ ಉಳಿತಾಯ ವಾಗುತ್ತದೆ. ಪಟ್ಟಣಕ್ಕೆ ಹೋಗಿಬರುವ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್‌ನಿಂದ ಹೆಚ್ಚಿನ ಲಾಭ ಸಿಗುತ್ತದೆ ಎನ್ನುವುದು ಅಧಿಕಾರಿಗಳ ಲೆಕ್ಕಚಾರ.

ಈಗಾಗಲೇ ಕೊರೊನಾ ಹಿನ್ನೆಲೆ ಪ್ರಯಾಣಿಕರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಸಂಸ್ಥೆ ಸಾಕಷ್ಟು ಹಾನಿ ಅನುಭವಿಸುವಂತಾಗಿತ್ತು. ಈ ಕಾರಣದಿಂದಾಗಿ ಪ್ರಯಾಣಿಕರನ್ನು ಸೆಳೆಯುವ ಜೊತೆಗೆ ಸಂಸ್ಥೆ ಅನುಭವಿಸುತ್ತಿರುವ ನಷ್ಟದ ಪ್ರಮಾಣವನ್ನು ಇಳಿಕೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ನಿತ್ಯ ಬಸ್ ನಲ್ಲಿ ಸಂಚರಿಸುವವರಿಗೆ ಇದರಿಂದ ಸಾಕಷ್ಟು ಅನುಕೂಲವಾಗಿದೆ.

ಎಚ್. ರಾಮನಗೌಡರ, (ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ)

ಕೋವಿಡ್ ಪೂರ್ವದಲ್ಲಿ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ 4,670 ಬಸ್‌ಗಳು ಸಂಚರಿಸುತ್ತಿದ್ದವು. ಈಗ 3,100 ಬಸ್‌ಗಳ ಸಂಚಾರವಿದ್ದು ಸಂಸ್ಥೆಗೆ ನಿತ್ಯ 2.2 ಕೋಟಿ ಆದಾಯ ಬರುತ್ತಿದೆ. ಈ ರೀತಿ ದಿನನಿತ್ಯ ಹಳ್ಳಿಗಳಿಂದ ಬೇರೆ ಬೇರೆ ಪ್ರದೇಶಗಳಿಂದ ಪಟ್ಟಣಕ್ಕೆ ಉದ್ಯೋಗಕ್ಕೆ ಬರುವವರಿಗೆ ಪಾಸ್ ಗಳಲ್ಲಿ ವಿನಾಯಿತಿ ನೀಡಿರುವುದಕ್ಕೆ ಸಾರ್ವಜನಿಕ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಂಸ್ಥೆಯವ್ರು ಪಾಸ್ ವ್ಯವಸ್ಥಾ ಮಾಡಿರೋದ್ರಿಂದ ನಂಗ್ ಭಾಳ್ ಅನುಕೂಲ ಆಗೈತಿ. ಕೋವಿಡ್ ನಂತಹ ಈ ಟೈಮ್ ನ್ಯಾಗ ನಂಗ್ ಪಾಸ್ ರಿಯಾಯಿತಿ ರೊಕ್ಕದಾಗ ಪಾಸ್ ಕೊಡ್ತಿರೋದ್ರಿಂದ 1000 ರೂಪಾಯಿ ವರೆಗೂ ಉಳಿತಾಯ ಆಗಾಕತ್ತೈತಿ.

ಈ.ಎಸ್. ಅಮರಗೋಳ, (ಪ್ರಯಾಣಿಕ)

Leave a Reply

Your email address will not be published. Required fields are marked *

You May Also Like

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ರಾಜ್ಯದಲ್ಲಿಂದು 1694 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1694 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಜಿಮ್ಸನಲ್ಲಿ ಘಟಿಕೋತ್ಸವ : ಸಚಿವ ಪಾಟೀಲ ಹೇಳಿಕೆ

ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.