ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಕೆಲ ದಿನಗಳಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ನದಿಯ ನೀರಿನ ಮಟ್ಟವೂ ಹೆಚ್ಚಾಗಿದೆ. ನೀರಿನ ಮಟ್ಟ ಹೆಚ್ಚುತ್ತಿರುವ ಬೆನ್ನಲ್ಲೆ ಸೇತುವೆ ಕುಸಿತ ಜನರಲ್ಲಿ ಆತಂಕ ಸೇಷ್ಟಿಸಿದೆ. ಘಟನೆಯಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ಸೇತುವೆಯಾಗಿದೆ. 2002ರಲ್ಲಿ ಸೇತುವೆ ನಿರ್ಮಿಸಲಾಗಿತ್ತು. ಸೇತುವೆ ನಿರ್ಮಿಸಿ 18 ವರ್ಷಗಳಾಗಿವೆಯಷ್ಟೇ. ಆರ್.ಡಿ.ಸಿ.ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ದುರಸ್ಥಿ ಕಾರ್ಯ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಸಾರಿಗೆ ಸಚಿವರ ಗದಗ ಜಿಲ್ಲಾ ಪ್ರವಾಸ

ಉತ್ತರಪ್ರಭಗದಗ: ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ…

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.

ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್?

ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.