ಬೆಂಗಳೂರು : ಉಸಿರು ಚೆಲ್ಲಿದ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿಎಂ, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತ ಪ್ರಿಯರ ಮನೆ ಮನಗಳಲ್ಲಿ ಸ್ಥಾನ ಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ, ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾ ಲೋಕಕ್ಕೆ ಎಂದೂ ತುಂಬಲಾಗದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿ ಟ್ವೀಟ ಮಾಡಿದ್ದಾರೆ.

ಅವರು ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. ಮುಂದಿನ ಜನ್ಮ ಎನ್ನುವುದು ಇದ್ದರೆ, ಅವರು ಕನ್ನಡ ನಾಡಿನಲ್ಲಿಯೇ ಕನ್ನಡಿಗನಾಗಿ ಹುಟ್ಟಿ ಋಣ ತೀರಿಸುವೆ ಎಂದು ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನಗಳನ್ನು ವ್ಯಕ್ತಪಡಿಸುತ್ತಿದ್ದ, ಎಸ್.ಪಿ.ಬಿ ನಿಧನಕ್ಕೆ ಇಡೀ ನಾಡು ಕಂಬನಿ ಮಿಡಿಯುತ್ತಿದೆ. ಸರಿಸಾಟಿಯಿಲ್ಲದ ಆ ಮಹಾನ್ ಗಾಯಕನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕೂಡ ಬೇಸರ ವ್ಯಕ್ತಪಡಿಸಿದ್ದು, ಎಸ್ ಪಿಬಿ ಸಾವು ಆಘಾತ ತಂದಿದೆ. ಅವರ ಸಾವಿನಿಂದಾಗಿ ಸಂಗೀತ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶಿವರಾಜ್ ಸಿಂಗ್ ಚವ್ಹಾಣ್ ಅವರು ಟ್ವೀಟ್ ಮಾಡಿ, ಬಾಲು ಕುಟುಂಬಸ್ಥರಿಗೆ ಆ ದೇವರು ದುಃಖ ತಡೆಯುವ ಶಕ್ತಿ ನೀಡಲಿ. ಬಾಲ ಸುಬ್ರಮಣ್ಯಂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದೂಡಿಕೆ!!

ಬೆಂಗಳೂರು : ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಅ. 28ರಂದು ಚುನಾವಣೆ ನಡೆದಿತ್ತು. ನ. 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ, ಸದ್ಯ ಈ ಸಮಯವನ್ನು ಬದಲಾಯಿಸಲಾಗಿದೆ.

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ರಾಜ್ಯದಲ್ಲಿಂದು ಸೋಂಕಿನ ಸುಂಟರಗಾಳಿ: 3176 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 3176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾದಂತಾಗಿದೆ.