ಬೆಂಗಳೂರು: ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕಾಗಿ ಜೆಡಿಎಸ್ ನವರು ಆರೆಸ್ಸೆಸ್ ಸೇರಲು ನಾಚುವುದಿಲ್ಲ ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ತನುವಿನೊಳು ಕಪಟ, ಮನದೊಳು ಮರ್ಕಟ, ಆಚಾರ ಲಿಂಗವ ಭಂಗಗೊಳಿಸಿ ಸಂಗ ಕೇಳಿಯ ಮನದ ಮುಂದಣ ಆಸೆಯ ಮತಿಗೇಡಿ ನೀನು ಶರಣನೆಂದು ಕೊಂಡೊಡೆ ಲಿಂಗ – ಜಂಗಮ ಕೂಡಲ ಸಂಗನು ಮುನಿದು ತಲೆ ಹೋಳಾದೀತು ಎಂಬ ವಚನದ ಸಾಲನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರದ ಆಸೆಯಿಂದ ಸಿದ್ದರಾಮಯ್ಯ ಅವರು ಅನ್ಯ ಪಕ್ಷಕ್ಕೆ ಹೋಗಿ, ಅಲ್ಲಿ ಬಿತ್ತಿದ ಹಾಗೂ ತೆಗೆದ ಕಳೆ ಏನು ಎಂಬುವುದಕ್ಕೆ ಉತ್ತರ ಸಿಕ್ಕಿದೆ. ಅವರನ್ನು ಆಲಂಗಿಸಿಕೊಂಡ ಪಕ್ಷವೇ ಸದ್ಯ ಎಲ್ಲವನ್ನೂ ಅನುಭವಿಸುತ್ತಿದೆ. ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಚಾಕು ಹಾಕಿದವರ ಮಾರ್ಜಾಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸಚಿವ ಸಂಪುಟ ಸಭೆಯಲ್ಲೆ ಚರ್ಚಿತ ವಿಷಯಗಳೇನು?

ರಾಜ್ಯದಲ್ಲಿ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಪತ್ರಕರ್ತ ಅಬ್ದುಲ್ ಅಜೀಜ್ ಗೆ ವಿಶೇಷ ಪ್ರಶಸ್ತಿ

ವರದಿ: ವಿಠಲ ಕೆಳೂತ್ ಮಸ್ಕಿ: ಪಟ್ಟಣದ ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್ ಅವರು ಕರ್ನಾಟಕ ಕಾರ್ಯನಿರತ…

7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!

ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.