ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 85,362 ಜನರಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 59,03,933ಕ್ಕೆ ಏರಿಕೆ ಕಂಡಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,089 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 93,379ಕ್ಕೆ ತಲುಪಿದೆ.
ಅಲ್ಲದೇ, 59,03,933 ಜನ ಸೋಂಕಿತರ ಪೈಕಿ 48,49,585 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 9,60,969 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
