ಚೆನ್ನೈ : ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣಂ ಅವರ ಅಂತ್ಯ ಸಂಸ್ಕಾರ ಇಂದು ಚೆನ್ನೈನ ರೆಡ್‍ ಹಿಲ್ ಫಾರ್ಮ್ ಹೌಸ್ ನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್ ನಲ್ಲಿ ಎಸ್ ಪಿಬಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ಇಂದು ಬೆಳಿಗ್ಗೆ 7 ರಿಂದ 11ರ ವರೆಗೂ ಪಾರ್ಥಿವ ಶರೀರ ವೀಕ್ಷಿಸಬಹುದು.

ತಮ್ಮ ನೆಚ್ಚಿನ ಸಂಗೀತಗಾರನ ಅಂತಿಮ ದರ್ಶನ ಪಡೆಯುವುದಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಆದರೆ, ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಲ್ಲಿ ಕುಟುಂಬಸ್ಥರು, ಸಂಬಂಧಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಗಾನ ಗಾರುಡಿಗನ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಶೋಕಾಚರಣೆ ಆಚರಿಸಲಾಯಿತು. ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿತ್ತು. ಕೊರೊನಾ ಮಹಾಮಾರಿಗೆ ಬಲಿಯಾಗಿರುವ ಎಸ್‍ ಪಿಬಿ, ಕಳೆದ 51 ದಿನಗಳಿಂದ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಕಪ್ಪತಗುಡ್ಡಕ್ಕೆ ಬೆಂಕಿ: ಗಿಡ ಮರಗಳು ಸುಟ್ಟು ಭಸ್ಮ

ಉತ್ತರಪ್ರಭ ಸುದ್ದಿಗದಗ: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಅರಣ್ಯ ತಡೆಯಲು ವಿಫಲವಾಗಿದೆ, ಅರಣ್ಯ ಇಲಾಖೆಯ…

ನೂರರ ಗಡಿದಾಟಿದ ಕೊರೊನಾ ಪ್ರಕರಣಗಳು

ಗದಗ : ಜಿಲ್ಲೆಯಲ್ಲಿ ದಿನದ ಲೆಕ್ಕದಲ್ಲಿ ಪತ್ತೆಯಾಗುತ್ತಿರುವ ಕೋವಿಡ್-19 ಸೋಂಕಿನ ಪ್ರಕರಣಗಳು ನೂರರ ಗಡಿಯ ಆಸುಪಾಸಿನಲ್ಲೇ…

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.